Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಅತ್ಯಂತ ಆಳದ ನೌಕಾಘಾತ:...

ವಿಶ್ವದ ಅತ್ಯಂತ ಆಳದ ನೌಕಾಘಾತ: ಫಿಲಿಪ್ಪೀನ್ಸ್ ಸಮುದ್ರ ತಳದಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 July 2022 10:26 PM IST
share

ನ್ಯೂಯಾರ್ಕ್, ಜು.19: ಕಳೆದ ತಿಂಗಳು ಫಿಲಿಪ್ಪೀನ್ಸ್ ಸಮುದ್ರದ 21,521 ಅಡಿ ತಳದಲ್ಲಿ ಪತ್ತೆಹಚ್ಚಲಾದ ಅಮೆರಿಕದ ನೌಕಾಪಡೆಯ ಹಡಗು ವಿಶ್ವದ ಅತ್ಯಂತ ಆಳದ ನೌಕಾಘಾತ ಎಂಬ ದಾಖಲೆಗೆ ಪಾತ್ರವಾಗಿದೆ ಎಂದು ಗಿನ್ನೆಸ್ ವಿಶ್ವದಾಖಲೆ ಸಂಸ್ಥೆ ಹೇಳಿದೆ.

 ದ್ವಿತೀಯ ವಿಶ್ವಯುದ್ಧದ ಸಂದರ್ಭ ಯುಎಸ್ಎಸ್ ಸ್ಯಾಮ್ಯುವೆಲ್ ಆರ್ ರಾಬರ್ಟ್ಸ್ ಎಂಬ ಈ ನೌಕೆ ಮುಳುಗಿತ್ತು. ಕಳೆದ ತಿಂಗಳು ಫಿಲಿಪ್ಪೀನ್ಸ್ನ ಸಮಾರ್ ದ್ವೀಪದ ಬಳಿ ಸಮುದ್ರದ ಮೇಲ್ಮೈಗಿಂತ 21,521 ಅಡಿ ಕೆಳಭಾಗದಲ್ಲಿ ಪತ್ತೆಹಚ್ಚಲಾಗಿದೆ. 1944ರ ಅಕ್ಟೋಬರ್ನಲ್ಲಿ ಲೆಯ್ಟೋ ಕೊಲ್ಲಿಯಲ್ಲಿ ಅಮೆರಿಕ ಮತ್ತು ಜಪಾನ್ ನೌಕಾಪಡೆಯ ನಡುವೆ ನಡೆದ ಯುದ್ಧದಲ್ಲಿ ಅಮರಿಕದ ಈ ನೌಕೆ ಮುಳುಗಿತ್ತು. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಅಮೆರಿಕದ ನೌಕಾಪಡೆ ಬಳಿಕ ಫಿಲಿಪ್ಪೀನ್ಸ್ ಅನ್ನು ವಶಪಡಿಸಿಕೊಂಡು ಜಪಾನ್ ನೌಕಾಪಡೆಯನ್ನು ಸೋಲಿಸಿತ್ತು.

ಅಮೆರಿಕದ ನೌಕಾಪಡೆಯಲ್ಲಿದ್ದ ಸ್ಯಾಮುವೆಲ್ ರಾಬರ್ಟ್ಸ್ ಮತ್ತು ಜಾನ್ಸ್ಟನ್ ಹಡಗುಗಳೆರಡೂ ಎರಡನೇ ವಿಶ್ವಯುದ್ಧದಲ್ಲಿ ಸಮುದ್ರದಲ್ಲಿ ಮುಳುಗಿದ್ದವು. ಸಮುದ್ರದ ತಳದಲ್ಲಿ ಈ ನೌಕೆ ದಕ್ಷಿಣ ಅಮೆರಿಕದ ಅತೀ ಎತ್ತರದ ಪರ್ವತ ಅಕೊನ್ಕಗುವದಷ್ಟು ಆಳದಲ್ಲಿದೆ. ಲಂಬ ಅಂತರದಲ್ಲಿ ಹೇಳುವುದಾದರೆ, ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾದಂತಹ 8 ಕಟ್ಟಡಗಳಷ್ಟು ಅಥವಾ 20 ಐಫಲ್ ಗೋಪುರದಷ್ಟು ಆಳದಲ್ಲಿ ಸಮುದ್ರದ ತಳದಲ್ಲಿತ್ತು ಎಂದು ವರದಿಯಾಗಿದೆ.

ಅಟ್ಲಾಂಟಿಕ್ ಸಾಗರದ ತಳದಲ್ಲಿ ಪತ್ತೆಯಾಗಿದ್ದ ಆರ್ಎಂಎಸ್ ಟೈಟಾನಿಕ್ ಹಡಗು 12,470 ಅಡಿ ಆಳದಲ್ಲಿತ್ತು. ಸ್ಯಾಮ್ಯುವೆಲ್ ಆರ್ ರಾಬರ್ಟ್ಸ್ ನೌಕೆ ಅದಕ್ಕಿಂತ 45% ಅಧಿಕ ಆಳದಲ್ಲಿ ಪತ್ತೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X