ಜು.20: ಪತ್ರಕರ್ತರು ಗ್ರಾಮ ವಾಸ್ತವ್ಯವಿದ್ದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕುತ್ಲೂರಿನಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ್ದ ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜು.೨೦ರಂದು ಪೂ.೧೧:೧೫ಕ್ಕೆ ಪತ್ರಿಕಾ ಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸಮವಸ್ತ್ರ ವಿತರಿಸುವರು. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕಿ ಗಾಯತ್ರಿ ಆರ್., ರೆಡ್ ಕ್ರಾಸ್ ಸೊಸೈಟಿ ಅಫ್ ಇಂಡಿಯಾದ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಕುತ್ಲುರು ಸರಕಾರಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story