ರಾಜ್ಯದ ಸಹಕಾರ ಇಲಾಖೆಯ ನೂತನ ರಿಜಿಸ್ಟ್ರಾರ್‌ಗೆ ಅಭಿನಂದನೆ

ಮಂಗಳೂರು, ಜು.೧೯: ರಾಜ್ಯ ಸಹಕಾರ ಇಲಾಖೆಯ ನೂತನ ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ಅಧಿಕಾರ ಸ್ವೀಕರಿಸಿಕೊಂಡ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಂಗಳವಾರ ಅಭಿನಂದಿಸಿದರು.
ಈ ಹಿಂದೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜಿಯಾವುಲ್ಲಾ ಇತ್ತೀಚೆಗೆ ನಿವೃತ್ತಿ ಹೊಂದಿದ್ದು, ಅವರ ಸ್ಥಾನಕ್ಕೆ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ನೇಮಕಗೊಂಡಿದ್ದು, ಇತ್ತೀಚೆಗೆ ಅಧಿಕಾರ ಸ್ವೀಕರಿಸಿಕೊಂಡಿದ್ದರು.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಬೆಂಗಳೂರಿನಲ್ಲಿ ರಿಜಿಸ್ಟ್ರಾರ್‌ರ ಕಚೇರಿಗೆ ಭೇಟಿ ನೀಡಿ ಅಭಿನಂದಿಸಿದರು.
Next Story