ರಸ್ತೆ ಅಪಘಾತ: ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಬೆಳಗಾವಿ ಮೂಲದ ಯೋಧ ಸೂರಜ್ ಮೃತ್ಯು

ಸೂರಜ್ ಧೋಂಡಿರಾಮ ಸುತಾರ್- ಮೃತ ಯೋಧ
ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸೂರಜ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧ, ಚಿಕ್ಕೋಡಿ ತಾಲೂಕಿನ ಯಡೂರವಾಡಿಯ ಸೂರಜ್ ಧೋಂಡಿರಾಮ ಸುತಾರ (30) ಎಂದು ಗುರುತಿಸಲಾಗಿದೆ.
ಪಶ್ಚಿಮ ಬಂಗಾಳದ ಪಂಜಿಪಾಡಾ ಸಮೀಪ ಯೋಧ ತನ್ನ ಪತ್ನಿ ಸಮೇತರಾಗಿ ಆಟೊದಲ್ಲಿ ಕೆಲಸದ ಸ್ಥಳಕ್ಕೆ ಹೋಗುತ್ತಿದ್ದರು. ಆಟೊದಿಂದ ಇಳಿಯುವ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆ. ಅದರ ಚಕ್ರಕ್ಕೆ ಸಿಲುಕಿ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ದೆಹಲಿ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬುಧವಾರ (ಜುಲೈ 20) ಬೆಳಿಗ್ಗೆ ಪಾರ್ಥಿವ ಶರೀರ ತರಲಾಗುವುದು. ನಂತರ ಯಡೂರವಾಡಿಯಲ್ಲಿ ಸಕಲ ಸರ್ಕಾರಿ ಗೌರವದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Next Story





