ಸರಳವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಹುಬ್ಬಳ್ಳಿ, ಜು19: ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನು ವಿದ್ಯಾನಗರ ಠಾಣೆ ಪೊಲೀಸರು ಹುಬ್ಬಳ್ಳಿ ನಗರದ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ತಮ್ಮ ವಶಕ್ಕೆ ಮನವಿ ಮಾಡಲಿಲ್ಲ ಎಂದು ಹೇಳಲಾಗಿದೆ. ಹೆಚ್ಚಿನ ವಿಚಾರಣೆಗೆಂದು ಪೊಲೀಸರು ಮೊದಲು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ನಂತರ ಮತ್ತೆ 6 ದಿನ ವಶಕ್ಕೆ ಪಡೆದಿದ್ದರು. ಈ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
Next Story





