Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ರೀತಿ' ಯೋಜನೆ'ಗೆ 14 ಸರಕಾರಿ ಮತ್ತು 16...

‘ರೀತಿ' ಯೋಜನೆ'ಗೆ 14 ಸರಕಾರಿ ಮತ್ತು 16 ಖಾಸಗಿ ಇಂಜಿನಿಯರಿಂಗ್ ಕಾಲೇಜು ಆಯ್ಕೆ

ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ► ಉನ್ನತ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಸಿದ ಪ್ರೊ.ಕರಿಸಿದ್ದಪ್ಪ ನೇತೃತ್ವದ ಸಮಿತಿ

ವಾರ್ತಾಭಾರತಿವಾರ್ತಾಭಾರತಿ20 July 2022 12:05 AM IST
share
‘ರೀತಿ ಯೋಜನೆಗೆ 14 ಸರಕಾರಿ ಮತ್ತು 16 ಖಾಸಗಿ ಇಂಜಿನಿಯರಿಂಗ್ ಕಾಲೇಜು ಆಯ್ಕೆ

ಬೆಂಗಳೂರು, ಜು. 19: ‘ರಾಜ್ಯದಲ್ಲಿರುವ 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಇಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ‘ರೀತಿ’ (ರೀಜನಲ್ ಎಕೋ ಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ಮಾಡಲಾಗಿದೆ. ಇದರಿಂದ ಎಲ್ಲ ಜಿಲ್ಲೆಗಳಲ್ಲೂ ಗುಣಮಟ್ಟದ ಇಂಜಿನಿಯರಿಂಗ್ ಶಿಕ್ಷಣ ನೀಡಲು ಅನುಕೂಲ ಆಗಲಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತಮಟ್ಟದ ಸಮಿತಿಯು ಸರಕಾರಕ್ಕೆ ತನ್ನ ವರದಿ ಸಲ್ಲಿಸಿತು. ಸರಕಾರದ ಪರವಾಗಿ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ.ಅಶ್ವತ್ಥ ನಾರಾಯಣ, ‘ಜಿಲ್ಲೆಗೆ ತಲಾ ಒಂದರಂತೆ ಒಟ್ಟು 30 ಕಾಲೇಜುಗಳನ್ನು `ಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆ(ರೀತಿ) ಯೋಜನೆಯಡಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳನ್ನು ಪರಿಪೋಷಣೆ (ಇನ್ಕ್ಯುಬೇಷನ್), ಆಕ್ಸಲೇಟರ್ ಮತ್ತು ಸೂಪರ್-30 ಎನ್ನುವ ಮೂರು ವಿಭಾಗಗಳಡಿ ಪರಿಗಣಿಸಲಾಗಿದೆ. ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಇಂಜಿನಿಯರಿಂಗ್ ಸಂಸ್ಥೆಗಳನ್ನು ಆರಿಸಿಕೊಳ್ಳಲಾಗಿದೆ' ಎಂದು ವಿವರಿಸಿದರು.

‘ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಗಳಲ್ಲೇ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರಕಾರದ ಗುರಿ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಕಳೆದ ವರ್ಷದ ನವೆಂಬರಿನಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿತ್ತು. ಜತೆಗೆ, ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸೂಕ್ತ ಖಾಸಗಿ/ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳನ್ನು ಆಯ್ಕೆ ಮಾಡಲು ಸರಕಾರದ ನವೋದ್ಯಮ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉಪಸಮಿತಿ ರಚಿಸಲಾಗಿತ್ತು’ ಎಂದು ಅವರು ಹೇಳಿದರು.

‘ಕಾಲೇಜು ಆಡಳಿತ ಮಂಡಲಿ, ಉದ್ಯಮರಂಗ ಮತ್ತು ವಿಟಿಯು ಮೂರೂ ಸೇರಿಕೊಂಡು `ರೀತಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಿದ್ದು, ತಲಾ ಶೇ.33ರಷ್ಟು ವೆಚ್ಚ ಭರಿಸಲಿವೆ. ಇದು ಐತಿಹಾಸಿಕ ಕ್ರಮವಾಗಿದ್ದು, ಇದಕ್ಕೆ ನೂತನ ಎನ್‍ಇಪಿ ಸೂಕ್ತ ಅವಕಾಶ ಒದಗಿಸಿದೆ. 2 ಮತ್ತು 3ನೆ ಸ್ತರದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳನ್ನು ಉನ್ನತೀಕರಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಔದ್ಯಮಿಕ ಅರಿವು ಮತ್ತು ಸಂಶೋಧನೆ ಆಧರಿತ ತಾಂತ್ರಿಕ ಶಿಕ್ಷಣ ನೀಡುವುದು ಇದರ ಹೆಗ್ಗುರಿಯಾಗಿದೆ. ಆ ಮೂಲಕ ರಾಜ್ಯದ ಉದ್ದಗಲಕ್ಕೂ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿರಬೇಕೆಂಬ ಕನಸನ್ನು ನನಸು ಮಾಡಲಾಗುತ್ತಿದೆ' ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸ್ಟಾರ್ಟಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಉನ್ನತ ಶಿಕ್ಷಣ ಪರಿಷತ್ತಿನ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಉದ್ಯಮಿ ನಾರಾಯಣನ್ ರಾಮಸ್ವಾಮಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಲಹೆಗಾರ ಕಾರ್ತಿಕ್ ಕಿಟ್ಟು ಮತ್ತು ವಿಟಿಯು ಕುಲಸಚಿವ ಆನಂದ್ ದೇಶಪಾಂಡೆ ಹಾಜರಿದ್ದರು.

ಆಯ್ಕೆಯಾದ ಸರಕಾರಿ ಕಾಲೇಜುಗಳು: ಚಾಮರಾಜನಗರ, ಚಳ್ಳಕೆರೆ, ಹಾಸನ, ಹಾವೇರಿ, ಕುಶಾಲನಗರ, ತಲಕಾಡು, ಕೃಷ್ಣರಾಜಪೇಟೆ, ರಾಯಚೂರು, ರಾಮನಗರ, ಕಾರವಾರ, ಹೂವಿನಹಡಗಲಿಯ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳು, ಬೆಂಗಳೂರಿನ ಎಸ್‍ಕೆಎಸ್‍ಜೆಟಿಐ, ದಾವಣಗೆರೆಯ ಬಿಡಿಟಿ ಕಾಲೇಜು ಮತ್ತು ಕಲಬುರಗಿಯಲ್ಲಿರುವ ವಿಟಿಯು ಪಿಜಿ ಸೆಂಟರ್ ಆಯ್ಕೆಯಾಗಿವೆ.

‘ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಕೇಂದ್ರಿತ ಕೌಶಲ್ಯ ಮತ್ತು ಸಂಶೋಧನಾ ಬಹುಶಿಸ್ತೀಯ ಶಿಕ್ಷಣ ಒದಗಿಸಲಾಗುವುದು. ಆ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಿ, ಅವರಲ್ಲಿ ಉದ್ಯಮಶೀಲತೆಯನ್ನೂ ಬೆಳೆಸಲಾಗುವುದು. ಜತೆಗೆ, ಮೇಲ್ಕಂಡ 30 ಕಾಲೇಜುಗಳಲ್ಲಿ ಸ್ವಯಂ ಮೌಲ್ಯಮಾಪನ ಮತ್ತು `ಮೆಂಟರ್-ಆಡಿಟ್ ಮಾದರಿ’ ಮೂಲಕ ಉತ್ತರದಾಯಿತ್ವವನ್ನು ತರಲಾಗುವುದು'

-ಡಾ.ಅಶ್ವತ್ಥ ನಾರಾಯಣ ಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X