ಬೆಂಗಳೂರು: ಆಫ್ರಿಕಾ ವಿದ್ಯಾರ್ಥಿ ನಾಯಕ ವಶಕ್ಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.20: ರಾಜಧಾನಿ ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದ ಆಫ್ರಿಕಾ ವಿದ್ಯಾರ್ಥಿಗಳ ನಾಯಕ ಭಾಸ್ಕೋ ಕವಾಸಿಯನ್ನು ಹೊಸದಿಲ್ಲಿ ಇಮಿಗ್ರೇಶನ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಉಗಾಂಡ ಮೂಲದ ಭಾಸ್ಕೋ ಕವಾಸಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಆಫ್ರಿಕನ್ ವಿದ್ಯಾರ್ಥಿಗಳ ಅಸೋಸಿಯೇಷನ್ ನಡೆಸುತ್ತಿದ್ದ. ಜತೆಗೆ, ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಕಾನೂನು ಸಮಾಲೋಚಕನಾಗಿ ಸಹಾಯ ಮಾಡುತ್ತಿದ್ದ ಎನ್ನಲಾಗಿದೆ.
2005ರಿಂದಲೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಎನ್ನಲಾಗುತ್ತಿದೆ. ಸದ್ಯ ಈತನನ್ನು ಹೊಸದಿಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
Next Story





