ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ : ಕಣ್ಣು ಸರಿಯಾಗಿ ಕಾಣದಿರುವ ಬಗ್ಗೆ ಚಿಂತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಬಾರಕೂರು ಹೊಸಾಳ ನಿವಾಸಿ ಚಂದ್ರಶೇಖರ ಶೆಟ್ಟಿ (೫೮) ಎಂಬವರು ಜು.೧೯ರಂದು ಸಂಜೆ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ ೩೪/೨೦೨೨ ಕಲಂ: ೧೭೪ ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
ಕೊಲ್ಲೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ತೂರು ಗ್ರಾಮದ ಮಾರಣಕಟ್ಟೆ ನಿವಾಸಿ ನಾರಾಯಣ ದೇವಾಡಿಗ (೬೫) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.೧೯ರಂದು ರಾತ್ರಿ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವಿಪರೀತ ಶರಾಬು ಕುಡಿತದ ಚಟ ಹೊಂದಿದ್ದ ತಲ್ಲೂರು ಹೇರಿಕುದ್ರು ನಿವಾಸಿ ಪ್ರಶಾಂತ ಶೆಟ್ಟಿ(೪೫) ಎಂಬವರು ಜು.೨೦ರಂದು ಬೆಳಗ್ಗೆ ತಲ್ಲೂರಿನ ಪ್ರವಾಸಿ ಬಾರಿನ ಸಮೀಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





