ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜು.೨೦: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ದಿನದಂದು ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಜಿಲ್ಲೆಯ ಹಿರಿಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೩೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: ೦೮೨೦-೨೫೭೪೮೧೦, ೨೫೭೪೮೧೧ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





