ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜು.೨೦: ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಯುವಜನರಿಗೆ ಸರ್ಕಾರದ ಸಂಸ್ಥೆಗಳಾದ ಐ.ಟಿ.ಐ.ಎಸ್, ಜಿ.ಟಿ.ಟಿ.ಸಿ ಮತ್ತು ಕೆ.ಜಿ.ಟಿ.ಟಿ.ಐನಲ್ಲಿ ಅಲ್ಪಾವಧಿ ಕೋರ್ಸ್‌ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಕೌಶಲ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೧೮ರಿಂದ ೨೫ ವರ್ಷದೊಳಗಿನ, ಎಸೆಸೆಲ್ಸಿ, ದ್ವಿತೀಯ ಪಿಯುಸಿ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರುವ, ಮೇಲಿನ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿರುವ ಅರ್ಹ ಅಭ್ಯರ್ಥಿಗಳು ಆಗಸ್ಟ್ ೨೯ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ಮೊ.ನಂ:೯೬೦೬೦೬೬೩೮೯, ೮೮೨೪೩೦೦೪೦೦, ದೂ.ಸಂಖ್ಯೆ: ೦೮೨೦-೨೫೭೪೮೮೨ ಅನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.







