ದಿನಬಳಕೆ ಆಹಾರದ ಮೇಲೆ ತೆರಿಗೆ; ಎಸ್ಡಿಪಿಐಯಿಂದ ಪ್ರತಿಭಟನೆ

ಮಂಗಳೂರು: ಮೋದಿ ಸರಕಾರದ ಜನ ವಿರೋಧಿಯಾದ ತೆರಿಗೆ ಹೇರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ನಡೆಯಿತು.
ಸರಕಾರದ ಜಿ.ಎಸ್.ಟಿ ತೆರಿಗೆಯ ವಿರುದ್ಧ ಘೋಷಣೆ ಗಳನ್ನು ಕೂಗುವುದರ ಮೂಲಕ ವಿರೋಧ ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಲೀಲ್ ಕೆ, ಕಾರ್ಯದರ್ಶಿ ಅಕ್ಬರ್ ರಾಝ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಸುಹೈಲ್ ಖಾನ್ ಮುಂತಾದ ನಾಯಕರು ಉಪಸ್ಥಿತರಿದ್ದರು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
Next Story





