Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೆಸ್ಸೆಸ್ ಅಜೆಂಡಾ ವಿರುದ್ಧ...

ಆರೆಸ್ಸೆಸ್ ಅಜೆಂಡಾ ವಿರುದ್ಧ ವಿದ್ಯಾರ್ಥಿಗಳು ಒಗ್ಗೂಡುವುದು ಅನಿವಾರ್ಯ: ಮನೋಜ್ ಅಜಾದ್

ಬೆಂಗಳೂರು ವಿವಿಯಲ್ಲಿ ಆರೆಸ್ಸೆಸ್ ಆಳ ಮತ್ತು ಅಗಲ ಕೃತಿಯ ಸಂವಾದ

ವಾರ್ತಾಭಾರತಿವಾರ್ತಾಭಾರತಿ20 July 2022 10:25 PM IST
share
ಆರೆಸ್ಸೆಸ್ ಅಜೆಂಡಾ ವಿರುದ್ಧ ವಿದ್ಯಾರ್ಥಿಗಳು ಒಗ್ಗೂಡುವುದು ಅನಿವಾರ್ಯ: ಮನೋಜ್ ಅಜಾದ್

ಬೆಂಗಳೂರು, ಜು.20: ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ದೇವನೂರ ವಹಾದೇವ ಅವರು ಬರೆದಿರುವ ‘ಆರೆಸ್ಸೆಸ್ ಆಳ ಮತ್ತು ಅಗಲ’ ಪುಸ್ತಕದ ಕುರಿತು ಸಂವಾದ ಕಾರ್ಯಕ್ರಮವನ್ನು ಬುಧವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿ ಮುಖಂಡ ಹಾಗೂ ವಿದ್ಯುನ್ಮಾನ ಮಾಧ್ಯಮ ವಿಭಾಗದ ವಿದ್ಯಾರ್ಥಿ ಮನೋಜ್ ಅಜಾದ್ ಮಾತನಾಡಿ, ‘ಇಂದು ಶಿಕ್ಷಣ ವ್ಯವಸ್ಥೆಯಲ್ಲಿ ಕೋಮುವಾದೀಕರಣವನ್ನು ರಾಜ್ಯ ಬಿಜೆಪಿ ಸರಕಾರವು ನೇರವಾಗಿ ಹೇರುತ್ತಿದೆ. ಕೇಂದ್ರ ಸರಕಾರವು ಎನ್‍ಇಪಿ ಅಡಿಯಲ್ಲಿ ಶಿಕ್ಷಣದ ವ್ಯಾಪರೀಕರಣದಲ್ಲಿ ತೊಡಗಿದೆ. ಒಟ್ಟಾರೆ ಬಿಜೆಪಿ ಸರಕಾರಗಳು ಒಗ್ಗೂಡಿ ಶಿಕ್ಷಣವನ್ನು ಕೇಸರೀಕರಣ ಮಾಡುತ್ತಿವೆ. ಈ ಫ್ಯಾಶಿಸಂ ಸರಕಾರಗಳ ಗುಟ್ಟನ್ನು ನಾವೆಲ್ಲರೂ ತಿಳಿದುಕೊಳ್ಳಬೇಕಾದರೆ, ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರೆಸ್ಸೆಸ್ ಆಳ ಮತ್ತು ಅಗಲ’ ಪುಸ್ತಕವನ್ನು ಓದಬೇಕು. ಪ್ರಜ್ಞಾವಂತ ವಿದ್ಯಾರ್ಥಿಗಳಾಗಿ ಬಿಜೆಪಿಯ ಹುನ್ನಾರವನ್ನು ಅರಿತು ವಿದ್ಯಾರ್ಥಿಗಳು ಒಗ್ಗೂಡಬೇಕಾಗಿದೆ ಎಂದರು. 

ಒಂದೇ ಧರ್ಮ, ಒಂದೇ ಬಾವುಟ, ಘೋಷಣೆಯ ಮೂಲಕ ಆರೆಸ್ಸೆಸ್‍ನ ಅಜೆಂಡಾವನ್ನು ವಿಫಲಗೊಳಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ. ಮನುಸ್ಮೃತಿಯನ್ನು ಸಂವಿಧಾನವನ್ನಾಗಿಸಬೇಕು ಎನ್ನುವ ಸಿದ್ಧಾಂತವನ್ನು ಹೊಂದಿರುವ ಆರೆಸ್ಸೆಸ್‍ನ ಇತ್ತೀಚಿನ ನಡುವಳಿಕೆಗಳು ವಿದ್ಯಾರ್ಥಿ ಸಮುದಾಯವನ್ನೇ ಬೆಚ್ಚಿ ಬೀಳಿಸುತ್ತಿವೆ. ಇದರ ವಿರುದ್ಧ ವಿದ್ಯಾರ್ಥಿಗಳು ಒಗ್ಗೂಡದಿದ್ದರೆ, ಬಹುದೊಡ್ಡ ಅಪಾಯ ಎದುರಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು. 

ಸಂವಾದದಲ್ಲಿ ವಿಶ್ವವಿದ್ಯಾಲಯದ ಆರ್ಥಿಕ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸುಭಾಷ್  ಟಿ.ಎನ್, ರಾಜ್ಯಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಆದ ರಾಜೇಶ್ ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಹಾಸ್ಟೆಲ್‍ನಲ್ಲಿ ಉಚಿತವಾಗಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಂಚಲಾಯಿತು. ಪುಸ್ತಕವನ್ನು ಬೆಂಗಳೂರು ವಿವಿ ಸೇರಿದಂತೆ ಎಲ್ಲಾ ವಿವಿಗಳಲ್ಲಿಯೂ ಹಂಚಿ ವಿದ್ಯಾರ್ಥಿಗಳಿಗೆ ಆರೆಸ್ಸೆಸ್ ಅಜೆಂಡಾವನ್ನು ವಿಫಲಗೊಳಿಸಲಾಗುವುದು ಎಂದು ಸಂವಾದದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಘೋಷಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X