ಸಾಗರ; ಆತ್ಮಹತ್ಯೆಗೆ ಯತ್ನಿಸುವ ವೇಳೆ ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ಹಲ್ಲೆ: ಪ್ರಕರಣ ದಾಖಲು

ಸಾಗರ: ತಾಲೂಕಿನ ಬೇಳೂರು ಗ್ರಾಮದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಸುತ್ತಿದ್ದ ಸಂದರ್ಭ ಬುದ್ಧಿವಾದ ಹೇಳಿದ ವ್ಯಕ್ತಿ ಗೆ ಯುವಕ ರಾಡ್‌ನಿಂದ ಹಲ್ಲೆ ಮಾಡಿದ ಆರೋಪಕ್ಕೆ ಸಂಭಧಿಸಿ ಬುಧವಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಳೂರಿನ ರಾಜೀವ (36) ಮಂಗಳವಾರ ಗ್ರಾಮದ ತೋಟವೊಂದರಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಗಮನಿಸಿ ಯುವಕನನ್ನು ತಡೆದಿದ್ದಾರೆ. ಇದೇ ವೇಳೆ ಶೇಷಗಿರಿ ಎಂಬ ಹಿರಿಯರೊಬ್ಬರು ರಾಜೀವನಿಗೆ ಬುದ್ಧಿವಾದ ಹೇಳಿದ್ದಾರೆ. ಆಗ ಶೇಷಗಿರಿಯವರಿಗೆ ರಾಜೀವ ರಾಡ್‌ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಹಲ್ಲೆಗೊಳಗಾದ ಶೇಷಗಿರಿಯವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಸಂಬಂದ ಗ್ರಾಮಾಂತರ ಠಾಣೆಗೆ ಶೇಷಗಿರಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





