Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಸಚಿವ ಈಶ್ವರಪ್ಪರಿಗೆ...

ಮಾಜಿ ಸಚಿವ ಈಶ್ವರಪ್ಪರಿಗೆ ಕ್ಲೀನ್‌ಚಿಟ್‌: ಆಮ್‌ ಆದ್ಮಿ ಪಾರ್ಟಿ ವಿರೋಧ

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 July 2022 1:28 PM IST
share

ಬೆಂಗಳೂರು, ಜು.21: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಕ್ಲೀನ್‌ ಚಿಟ್‌ ನೀಡಿರುವ ಪೊಲೀಸರ ನಡೆಯನ್ನು ಆಮ್‌ ಆದ್ಮಿ ಪಾರ್ಟಿ ಖಂಡಿಸಿದೆ.

ಎಎಪಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ, “ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಪ್ರಮುಖ ಆರೋಪಿಯಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಂತೋಷ್‌ಅವರು ಈಶ್ವರಪ್ಪ ವಿರುದ್ಧ ವಾಟ್ಸ್ಆ್ಯಪ್‌ನಲ್ಲಿ ಡೆತ್‌ ನೋಟ್‌ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಈಶ್ವರಪ್ಪರ ವಿಚಾರಣೆಯನ್ನೂ ನಡೆಸದೇ ಕ್ಲೀನ್‌ ಚಿಟ್‌ ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರಕಾರ ಈ ಮೂಲಕ ರವಾನಿಸಿದೆ" ಎಂದು ಹೇಳಿದ್ದಾರೆ.

“ರಾಜ್ಯದ ಭ್ರಷ್ಟ ಬಿಜೆಪಿ ಸರಕಾರವು ಪೊಲೀಸ್‌ ತನಿಖೆ ಮೇಲೆ ಪ್ರಭಾವ ಬೀರಿ, ಪ್ರಮುಖ ಆರೋಪಿ ಈಶ್ವರಪ್ಪರನ್ನು ರಕ್ಷಿಸಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ. ಘಟನೆ ನಡೆದಾಗಲೇ ಈಶ್ವರಪ್ಪರ ಬೆನ್ನಿಗೆ ನಿಂತಿದ್ದ ಬಿಜೆಪಿ ಸರಕಾರವು, ತನಿಖೆಗೂ ಮುನ್ನವೇ ಈಶ್ವರಪ್ಪರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಂತರ ಆಮ್‌ ಆದ್ಮಿ ಪಾರ್ಟಿಯು ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಈಶ್ವರಪ್ಪರ ರಾಜೀನಾಮೆ ಪಡೆದಿತ್ತು. ಆದರೆ ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್‌ ಪಾಟೀಲ್‌ರವರ ಕುಟುಂಬಕ್ಕೆ ಅನ್ಯಾಯವೆಸಗಿದೆ” ಎಂದು ಬಿ.ಟಿ.ನಾಗಣ್ಣ ದೂರಿದ್ದಾರೆ.

“ರಾಜಕೀಯ ಒತ್ತಡಕ್ಕೆ ಮಣಿದ ಉಡುಪಿ ಪೊಲೀಸರು ಈಶ್ವರಪ್ಪರ ವಿಚಾರಣೆ ನಡೆಸದೇ ಕೇವಲ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆಯು ಈ ದೋಷಪೂರಿತ ವರದಿಯನ್ನು ಹಿಂಪಡೆದು, ಈಶ್ವರಪ್ಪರ ವಿಚಾರಣೆ ನಡೆಸಬೇಕು. ಡೆತ್‌ನೋಟ್‌ ಆಧಾರವಾಗಿಟ್ಟುಕೊಂಡು ಈಶ್ವರಪ್ಪರನ್ನು ಬಂಧಿಸಿ, ಯಾವುದೇ ಒತ್ತಡಕ್ಕೆ ಮಣಿಯದೇ ವಿಚಾರಣೆ ನಡೆಸಬೇಕು. ಪೊಲೀಸ್‌ ತನಿಖೆಯ ಬದಲು ನ್ಯಾಯಾಂಗ ತನಿಖೆಗೆ ವಹಿಸಬೇಕು. ಈಶ್ವರಪ್ಪನವರು ಸಂತೋಷ್‌ ಪಾಟೀಲ್‌ರವರಿಗೆ ನೀಡಿದ ಕಿರುಕುಳ ಹಾಗೂ ವಂಚನೆಯು ರಾಜ್ಯದ ಜನತೆಗೆ ತಿಳಿಯಬೇಕು”ಎಂದು ಬಿ.ಟಿ.ನಾಗಣ್ಣ ಆಗ್ರಹಿಸಿದರು.

ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಆಮ್‌ ಆದ್ಮಿ ಪಾರ್ಟಿ ಹೋರಾಟ ಮಾಡಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಕೆ.ಜೆ.ಜಾರ್ಜ್‌ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದಿದ್ದರೂ ಟೀಕಿಸುತ್ತಿದ್ದ ಬಿಜೆಪಿಯು ಈಗ ಈಶ್ವರಪ್ಪರ ವಿರುದ್ಧ ಪೊಲೀಸ್‌ ತನಿಖೆಯನ್ನೂ ಸರಿಯಾಗಿ ನಡೆಸದಿರುವುದು ದುರಂತ. ಆರ್‌ಡಿಪಿಆರ್‌ ಹಗರಣಗಳು ಹಾಗೂ ಸಂತೋಷ್‌ ಪ್ರಕರಣದ ಕುರಿತು ಸೂಕ್ತ  ನ್ಯಾಯಾಂಗ ತನಿಖೆ ನಡೆಸದಿದ್ದರೆ ರಾಜ್ಯ ಸರಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು  ತೀವ್ರ ರೀತಿಯ ಹೋರಾಟ ಮಾಡಲಿದೆ”ಎಂದು ಬಿ.ಟಿ.ನಾಗಣ್ಣ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X