ಜು.24ರಂದು ‘ಬೀಡಿ ಬದುಕು’ ಪುಸ್ತಕ ಬಿಡುಗಡೆ

ಮಂಗಳೂರು, ಜು.21: ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಮತ್ತು ದಕ್ಷಿಣ ಕನ್ನಡ- ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟುದಾರರ ಯೂನಿಯನ್ ವತಿಯಿಂದ ಬೀಡಿ ಕಾರ್ಮಿಕರ ಸಮಾವೇಶ ಹಾಗೂ ‘ಬೀಡಿ ಬದುಕು’ ಪುಸ್ತಕ ಬಿಡುಗಡೆ ಸಮಾರಂಭ ಜು.24ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ನಳಿನ್‌ಕುಮಾರ್ ಕಟೀಲು ಪುಸ್ತಕ ಬಿಡುಗಡೆ ಮಾಡುವರು. ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು.
ಸಚಿವ ವಿ. ಸುನೀಲ್‌ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಎ.ಕೆ.ಎಂ.ಅಶ್ರಫ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ವಿವಿಧ ಬೀಡಿ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಜಗನ್ನಾಥ ಶೆಣೈ, ನಾಗೇಂದ್ರ ಡಿ. ಪೈ, ಆನಂದ ಪ್ರಭು ಭಾಗವಹಿಸುವರು ಎಂದು ಎಚ್‌ಎಂಎಸ್ ರಾಜ್ಯಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ ಗುರುವಾರ ಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಅಧ್ಯಕ್ಷ ಮುಹಮ್ಮದ್ ರಫಿ ಮಾತನಾಡಿ, ಸಮಾವೇಶದಲ್ಲಿ ಬೀಡಿ ಕಾರ್ಮಿಕರ ವಿವಿಧ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಬೀಡಿ ಕೈಗಾರಿಕೆಯ ಮೇಲೆ ಸರಕಾರ ವಿಧಿಸಿರುವ ನಿರ್ಬಂಧವನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಲಾಗುವುದು ಎಂದರು.
ದಕ್ಷಿಣ ಕನ್ನಡ- ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟುದಾರರ ಯೂನಿಯನ್ ಅಧ್ಯಕ್ಷ ಹರೀಶ್ ಕೆ.ಎಸ್., ಪ್ರಧಾನ ಕಾರ್ಯದರ್ಶಿ ಸಂಜೀವ ಪೂಜಾರಿ, ಕೋಶಾಧಿಕಾರಿ ಇಸ್ಮಾಯೀಲ್ ಡಿ.ಎಸ್. ಉಪಸ್ಥಿತರಿದ್ದರು.







