ಮಸೂದ್ ಕೊಲೆ ಪ್ರಕರಣ; ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನ ಮಸೂದ್ ಎಂಬ ಯುವಕನನ್ನು ಬೆಳ್ಳಾರೆ ಸಮೀಪ ದುಷ್ಕರ್ಮಿಗಳು ನಡೆಸಿದ ಕೊಲೆ ಕೃತ್ಯವನ್ನು ಶಾಸಕ, ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ.
ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಸೂದ್‌ನನ್ನು ದುಷ್ಕರ್ಮಿಗಳ ತಂಡವು ಮೊನ್ನೆ ರಾತ್ರಿ ಹಲ್ಲೆಗೈದಿದ್ದರು. ಗಂಭೀರ ಗಾಯಗೊಂಡ ಮಸೂದ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರಕಾರವು ಮೃತ ಮಸೂದ್‌ರ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕು ಎಂದು ಯು.ಟಿ.ಖಾದರ್ ರಾಜ್ಯ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Next Story