ಬ್ರಹ್ಮಾವರ: ಜು.22ರಂದು ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ನಾಯಕರಾದ ರಾಹುಲ್ ಗಾಂಧಿ ಅವರನ್ನು ಕೇಂದ್ರ ಸರಕಾರ ತನಿಖೆಯ ನೆಪದಲ್ಲಿ ಇಡಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅನಗತ್ಯ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಜು.22ರ ಶುಕ್ರವಾರ ಬೆಳಗ್ಗೆ ಬ್ರಹ್ಮಾವರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಬೆಳಗ್ಗೆ 10.30ಕ್ಕೆ ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್ ಸಮೀಪ ಸಮಾವೇಶಗೊಂಡು ಅಲ್ಲಿಂದ ಪ್ರತಿಭಟನಾ ಮೆರವಣೆಯು ಸಾಗಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.
Next Story





