ರೈಲು ಢಿಕ್ಕಿ ಹೊಡೆದು ಮೃತ್ಯು
ಮಣಿಪಾಲ: ರೈಲು ಢಿಕ್ಕಿ ಹೊಡೆದ ಪರಿಣಾಮ ಹಳಿಯಲ್ಲಿ ನಡೆದು ಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂಜಿಬೆಟ್ಟು ಸಗ್ರಿ ಸಮೀಪದ ಶ್ರೀನಿವಾಸ ನಗರ ಎಂಬಲ್ಲಿ ಜು.೨೦ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಶ್ರೀನಿವಾಸ ನಗರ ಬಾಡಿಗೆ ಮನೆ ನಿವಾಸಿ ಭೀಮಪ್ಪ(೩೧) ಎಂದು ಗುರುತಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್ ಹಾಕುವ ಕೆಲಸ ಮಾಡಿಕೊಂಡಿದ್ದ ಇವರು, ಕೆಲಸ ಸಿಗದೆ ಮನೆಗೆ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಬಾರ್ಕೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





