Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಗ್ರೋ ಸ್ಟಾರ್ಟ್‍ಅಪ್‍ಗಳು ದೇಶದ...

ಆಗ್ರೋ ಸ್ಟಾರ್ಟ್‍ಅಪ್‍ಗಳು ದೇಶದ ಅಭಿವೃದ್ಧಿಗೆ ಸಹಕಾರಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ21 July 2022 10:15 PM IST
share
ಆಗ್ರೋ ಸ್ಟಾರ್ಟ್‍ಅಪ್‍ಗಳು ದೇಶದ ಅಭಿವೃದ್ಧಿಗೆ ಸಹಕಾರಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜು.21: ಆಗ್ರೋ ಸ್ಟಾರ್ಟ್‍ಅಪ್‍ಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಕೃಷಿ ಪದ್ಧತಿಗಳಿಗೆ ಸಂಬಂಧಿಸಿದ ಸ್ಟಾರ್ಟ್‍ಅಪ್‍ಗಳನ್ನು ಸ್ಥಾಪಿಸುವ ಚಿಂತನೆಯನ್ನು ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಬಿಡಬ್ಲ್ಯೂ ಬ್ಯುಸಿನೆಸ್ ವರ್ಲ್ಡ್ ಆಯೋಜಿಸಿದ್ದ ಯೂನಿಕಾರ್ನ್ ಶೃಂಗಸಭೆ ಮತ್ತು ಪ್ರಶಸ್ತಿ ಸಮಾರಂಭ-2022ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದು, ಕೃಷಿ ಕ್ಷೇತ್ರದಲ್ಲಿ ನವೀನ ಕೃಷಿ ಉತ್ಪನ್ನಗಳು, ಯಂತ್ರೋಪಕರಣಗಳ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ಕುರಿಸಾಕಾಣಿಕೆ, ಹೈನೋದ್ಯಮ, ಹೀಗೆ ಬಹಳಷ್ಟು ಅವಕಾಶಗಳಿವೆ. ಈ ಕ್ಷೇತ್ರಗಳನ್ನು ನವೋದ್ಯಮಿಗಳು ತಮ್ಮ ನಾವಿನ್ಯತೆಯ ಚಿಂತನೆಯಿಂದ ಅಭಿವೃದ್ಧಿಗೊಳಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

ಸ್ಟಾರ್ಟ್‍ಅಪ್‍ಗಳು ವಿಶ್ವದ ಭವಿಷ್ಯ: ಬೆಂಗಳೂರು ಯೂನಿಕಾರ್ನ್, ಡೆಕಾಕಾರ್ನ್ ಸಂಸ್ಥೆಗಳಿಗೆ ಅತ್ಯಂತ ಸೂಕ್ತವಾಗಿದೆ. ನವೋದ್ಯಮ ಪ್ರಪಂಚದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಯಾವುದೇ ರಂಗದಲ್ಲಿ ಯೂನಿಕಾರ್ನ್‍ಗಳು ಬರಬಹುದಾಗಿದೆ. ಅವಶ್ಯಕತೆಯೇ ಅವಿಷ್ಕಾರದ ಜೀವಾಳ. ಅವಿಷ್ಕಾರದ ಹಸಿವು ನಮ್ಮಲ್ಲಿರಬೇಕು. ಮನುಷ್ಯ ಬೆಳೆದಂತೆ ಅಗತ್ಯತೆಗಳು ಬೆಳೆದಿದ್ದು, ನಾಗರಿಕತೆಯೂ ಬೆಳೆದಿದೆ ಎಂದು ಅವರು ತಿಳಿಸಿದರು.

ಆಧುನಿಕತೆಯ ನಾಗರಿಕತೆಗೆ ಒಗ್ಗಿಕೊಂಡಿರುವ ಜನರು ಡಿಜಿಟಲೀಕರಣವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಬಳಸುತ್ತಿದ್ದಾರೆ. ನಮ್ಮಲ್ಲೇನಿದೆ ಎಂಬುದು ನಾಗರಿಕತೆ, ನಾವೇನಾಗಿದ್ದೇವೆ ಎಂಬುದು ನಮ್ಮ ಸಂಸ್ಕøತಿ. ಮಾನವೀಯ ಸ್ಪಂದನೆ ಹಾಗೂ ಸಾಮಾಜಿಕ ಕಳಕಳಿಯಂತಹ ಮೌಲ್ಯಗಳನ್ನು ಸ್ಟಾರ್ಟ್‍ಅಪ್‍ಗಳು ಹೊಂದಿರಬೇಕು. ಸ್ಟಾರ್ಟ್‍ಅಪ್‍ಗಳು ವಿಶ್ವದ ಭವಿಷ್ಯವಾಗಿದ್ದು, ಅದರ ಮೌಲ್ಯಗಳು ಸಮಾಜದ ಒಳಿತನ್ನು ಗುರಿಯಾಗಿಸಿಕೊಂಡಿರಬೇಕು. ಅವಿಷ್ಕಾರ, ಮೂಲಸೌಕರ್ಯ ಹಾಗೂ ಅಭಿವೃದ್ಧಿಯತ್ತ ದೇಶ ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿ ಸ್ಟಾರ್ಟ್‍ಅಪ್‍ಗಳ ಸ್ಥಾಪನೆಗೆ ಪೂರಕ ಪರಿಸರ: ಬೆಂಗಳೂರು ಸ್ಟಾರ್ಟ್‍ಅಪ್‍ಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿರುವ ನಗರ. ಬೆಂಗಳೂರಿನಲ್ಲಿ 400 ಅಂತರರಾಷ್ಟ್ರೀಯ ಗುಣಮಟ್ಟದ ಆರ್ ಎಂಡ್ ಡಿ ಕೇಂದ್ರಗಳಿವೆ. ದೇಶದ ಯಾವುದೇ ನಗರದಲ್ಲಿ ಇಷ್ಟು ಸಂಖ್ಯೆಯ ಸಂಶೋಧನಾ ಕೇಂದ್ರಗಳಿಲ್ಲ. ಸರಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸಿದ ಅವಿಷ್ಕಾರಗಳಿಂದಾಗಿ ಬೆಂಗಳೂರು ನಗರ ಇಂದು ಐಟಿಬಿಟಿ ಕ್ಷೇತ್ರವಾಗಿ ಬೆಳೆದಿದೆ ಎಂದು ಅವರು ತಿಳಿಸಿದರು.

ಕೃಷಿಯಿಂದ ಹಿಡಿದು ಏರೋಸ್ಪೇಸ್‍ವರೆಗೆ, ಜೆನಿಟಿಕ್ಸ್ ನಿಂದ ಜೆನೋಮಾಟಿಕ್ಸ್‍ವರೆಗೆ ಸ್ಟಾರ್ಟ್‍ಅಪ್‍ಗಳು ಇಲ್ಲಿವೆ. ಗರಿಷ್ಟ ಸಂಖ್ಯೆಯ ಯೂನಿಕಾರ್ನ್‍ಗಳು ಹಾಗೂ 3 ಡೆಕಾಕಾರ್ನ್‍ಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಸ್ಟಾರ್ಟ್‍ಅಪ್‍ಗಳಿಗೆ ಉತ್ತಮ ಪರಿಸರ, ನೀತಿಗಳಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. 

ಈಸ್ ಆಫ್ ಡೂಯಿಂಗ್ ಬಿಸನೆಸ್, ಐಟಿಬಿಟಿ ಪಾಲಿಸಿ, ಸೆಮಿಕಂಡಕ್ಟರ್ ನೀತಿ, ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನೂ ಶೀಘ್ರದಲ್ಲಿಯೇ ಸರಕಾರ ನಿರ್ಮಿಸಲಿದೆ. ಕರ್ನಾಟಕ ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಹೈಡ್ರೊಜನ್ ಇಂಧನ, ಸಮುದ್ರದಿಂದ ಅಮೋನಿಯಾ ಉತ್ಪಾದನಾ ಕಾರ್ಯವನ್ನೂ ಸರಕಾರ ಕೈಗೆತ್ತಿಕೊಳ್ಳಲಿದೆ. ಸರಕಾರದ ಈ ಎಲ್ಲ ಕ್ರಮಗಳು ರಾಜ್ಯದಲ್ಲಿ ಸ್ಟಾರ್ಟ್‍ಅಪ್‍ಗಳ ಸ್ಥಾಪನೆಗೆ ಪೂರಕವಾದ ಪರಿಸರವನ್ನು ನಿರ್ಮಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X