Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಶಾಲೆ ಮುಚ್ಚಬೇಡಿ: ಕಸಾಪ ಅಧ್ಯಕ್ಷ...

ಕನ್ನಡ ಶಾಲೆ ಮುಚ್ಚಬೇಡಿ: ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ

ವಾರ್ತಾಭಾರತಿವಾರ್ತಾಭಾರತಿ21 July 2022 10:18 PM IST
share
ಕನ್ನಡ ಶಾಲೆ ಮುಚ್ಚಬೇಡಿ: ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ

ಬೆಂಗಳೂರು, ಜು.21: ಸರಕಾರ ಮಾದರಿ ಶಾಲೆಗಳ ಹೆಸರಿನಲ್ಲಿ ಇದ್ದ ಕನ್ನಡ ಮಾಧ್ಯಮ ಶಾಲೆಗಳ ವಿಲೀನಕ್ಕೆ ಮುಂದಾದರೆ ಇದು ಕನ್ನಡಕ್ಕೆ ಮಾಡುವ ಘೋರ ಅನ್ಯಾಯ ಹಾಗೂ ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ಕಾರ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. 

ಪ್ರತಿ ಹೋಬಳಿಗೊಂದು ಮಾದರಿ ಶಾಲೆಗಳನ್ನು ರೂಪಿಸಬೇಕೆಂಬ ಸರಕಾರದ ಉದ್ದೇಶ ಸ್ವಾಗತಾರ್ಹವಾದುದೆ. ಆದರೆ, ಅಕ್ಕಪಕ್ಕದಲ್ಲಿ ಇರುವ ಕನ್ನಡಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ ಎಂಬ ನೆಪ ನೀಡಿ ಕನ್ನಡ ಶಾಲೆಗಳನ್ನು ಮಾದರಿ ಶಾಲೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ ಎನ್ನುವ ವರದಿಗಳು ಬಿತ್ತರವಾಗುತ್ತಿವೆ.

ಕನ್ನಡಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಲು ಮೂಲ ಕಾರಣ ಅರಿತು, ಅದಕ್ಕೆ ಪರಿಹಾರ ಕಾಣುವುದರಲ್ಲಿ ಅರ್ಥವಿದೆ. ಅದನ್ನು ಹೊರತುಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ವಾಹನ ಸೌಲಭ್ಯ ನೀಡುವ ಮೂಲಕ ಮಕ್ಕಳನ್ನು ಮಾದರಿ ಶಾಲೆಗೆ ಕರೆದು ತರಲಾಗುವುದು ಎನ್ನುವ ಬಗ್ಗೆಯೂ ವರದಿಯಾಗುತ್ತಿದೆ. ರಾಜ್ಯದಲ್ಲಿನ 48 ಸಾವಿರ ಶಾಲೆಗಳ ಪೈಕಿ 13,800 ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎನ್ನುವ ಉದ್ದೇಶ ಇಟ್ಟು ಶಾಲೆಗಳನ್ನು ವಿಲೀನ ಮಾಡಬಾರದು ಎಂದರು.

ನಮ್ಮ ರಾಜ್ಯದಲ್ಲಿನ ಭೌಗೋಳಿಕ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಕೆಲವು ಯೋಜನೆಗಳನ್ನು ಸರಕಾರದ ಅಧಿಕಾರಿಗಳ ಮಟ್ಟದಲ್ಲಿ ಮಾಡಿ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ತರಾತುರಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಅದರ ಸಾಧಕ-ಬಾಧಕಗಳ ಕುರಿತು ಚಿಂತನೆ ನಡೆಸುವುದಿಲ್ಲ. ಯೋಜನೆಗಳನ್ನು ಸಿದ್ಧಪಡಿಸುವ ಮುನ್ನ ಶಿಕ್ಷಣ ತಜ್ಞರ, ಕನ್ನಡ ಸಾಹಿತ್ಯ ಪರಿಷತ್ತಿನ, ಕನ್ನಡ ಪರ ಹೊರಾಟಗಾರರ ಅಭಿಪ್ರಾಯ, ಪಡೆಯಲಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ವೇಳೆ ಸರಕಾರ ಕನ್ನಡ ಸಾಹಿತ್ಯ ಪರಿಷತ್ತಿಗೆ ಈ ಜವಾಬ್ದಾರಿಯನ್ನು ನೀಡಿದರೆ ನಾವು ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದೆವು. ಆದರೆ ಶಿಕ್ಷಣ ಇಲಾಖೆಯ ಕ್ರಮವನ್ನು ಕನ್ನಡಿಗರಾದ ನಾವು ಸಹಿಸಲು ಸಾಧ್ಯವಿಲ್ಲ. ಜೊತೆಗೆ ಕನ್ನಡ ಶಾಲೆಗಳ ವಿಲೀನವನ್ನು ಕನ್ನಡ ನಾಡಿನ ಮತ್ತು ನುಡಿಯ ಕುರಿತು ಅಭಿಮಾನವಿರುವ ಯಾರೂ ಕೂಡ ಈ ರೀತಿಯ ಅವಸರದ ತೀರ್ಮಾನಕ್ಕೆ ಒಪ್ಪಿಗೆ ನೀಡುವುದಿಲ್ಲ ಎಂದರು. 

ಕನ್ನಡದ ಶಾಲೆಗಳನ್ನು ಶಾಶ್ವತವಾಗಿ ಮುಚ್ಚುವ ಕೆಲಸ ಆಗಬಾರದು. ಅದರ ಬದಲಿಗೆ ಇರುವ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಇನ್ನಷ್ಟು ಹೆಚ್ಚಾಗಿ ಆಕರ್ಷಿಸಬೇಕಾಗಿದೆ. ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಎಲ್ಲ್ಲ ಮೂಲಭೂತ ಸೌಕರ್ಯಗಳನ್ನು ನೀಡುವ ಯೋಜನೆ ಕಾರ್ಯಗತವಾಗಬೇಕಿದೆ. ಪಾಲಕರಲ್ಲಿ ಕನ್ನಡ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುವುದು ಎನ್ನುವ ಭರವಸೆ ನೀಡುವ ಕೆಲಸಗಳು ಸರಕಾರದ ಮಟ್ಟದಲ್ಲಿ ಆಗಬೇಕಿವೆ. ಅದನ್ನು ಹೊರತುಪಡಿಸಿ ಕನ್ನಡ ಶಾಲೆಗಳ ಬುಡಕ್ಕೆ ಕೊಡಲಿ ಏಟು ನೀಡುವ ಕಾರ್ಯ ನಿಲ್ಲಿಸಬೇಕಿದೆ ಎಂದು ಮಹೇಶ ಜೋಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X