ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜು.21: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್ ಅವರನ್ನು ರಾಜ್ಯ ವೈದ್ಯಕೀಯ ಸರಬರಾಜು ಲಿಮಿಟೆಡ್(ಕೆಎಸ್‍ಎಂಎಸ್‍ಸಿಎಲ್)ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತೆ ಕನಗವಲ್ಲಿ ಅವರನ್ನು ಆಹಾರ, ನಾಗರಿಕ ಪೂರೈಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿ ಪ್ರಭಾರದಲ್ಲಿರಿಸಿ ಆದೇಶ ಹೊರಡಿಸಲಾಗಿದೆ.
Next Story





