ಚುನಾವಣಾ ಅಕ್ರಮ ಆರೋಪ: ಬಿಜೆಪಿ ಮುಖಂಡ ತುಳಸಿ ಮುನಿರಾಜುಗೌಡ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು, ಜು.21: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಆಮಿಷ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‍ನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಬಿಜೆಪಿ ಮುಖಂಡ ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಕೇಸ್‍ನ್ನು ರದ್ದುಪಡಿಸಿ ಆದೇಶಿಸಿದೆ.
ಈ ದೂರನ್ನು ಚುನಾವಣಾ ಅಧಿಕಾರಿಗಳು ಮೊದಲು ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ಖಾಸಗಿ ದೂರನ್ನು ಸಲ್ಲಿಸಬೇಕು. ಆದರೆ, ಚುನಾವಣಾಧಿಕಾರಿಗಳು ನೇರವಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಹೀಗಾಗಿ, ಈ ದೂರಿಗೆ ವಿಚಾರಣಾ ಮಾನ್ಯತೆ ಇಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ತುಳಸಿ ಮುನಿರಾಜುಗೌಡ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
Next Story





