ಲೈಸೋಸೋಮ್ ಸೇರಿ ಅಪರೂಪದ ಕಾಯಿಲೆ: ನೀತಿ ಜಾರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಜು.21: ಲೈಸೋಸೋಮ್ (ಎಲ್‌ಎಸ್‌ಡಿ) ಸೇರಿ ಇತರೆ ಅಪರೂಪದ ಕಾಯಿಲೆಗಳಿಗೆ ತುತ್ತಾಗುವ ರೋಗಿಗಳಿಗೆ ನೆರವಾಗಲು ರೂಪಿಸಿರುವ 2021ರ ರಾಷ್ಟ್ರೀಯ ಅಪರೂಪದ ಕಾಯಿಲೆಗಳ ನೀತಿ ಜಾರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಲೈಸೋಸೋಮ್ ಸ್ಟೋರೇಜ್ ಡಿಸಾರ್ಡರ್ ಸಪೋರ್ಟ್ ಸೊಸೈಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.
ತಜ್ಞರ ಶಿಫಾರಸ್ಸಿನ ಮೇರೆಗೆ ಈ ನೀತಿಯನ್ನು ರೂಪಿಸಲಾಗಿದ್ದು, ದೇಶದಾದ್ಯಂತ ಅಪರೂಪದ ಕಾಯಿಲೆಗೆ ತುತ್ತಾದವರ ಸ್ಥಿತಿಗತಿಯನ್ನು ಪರಿಗಣಿಸಲಾಗಿದೆ. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ನೀತಿಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
Next Story





