ಅತ್ತೂರು ಪ್ರೊ.ಪ್ರೇಮಲತಾ ಶೆಟ್ಟಿ ನಿಧನ

ಮಂಗಳೂರು : ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕಿ ಅತ್ತೂರು ನಿವಾಸಿ ಪ್ರೊ. ಪ್ರೇಮಲತಾ ಶೆಟ್ಟಿ (91) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು ೪೦ ವರ್ಷ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿಕೊಂಡಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಭಾರತ ಸ್ಕೌಟ್ ಆ್ಯಂಡ್ ಗೈಡ್ಸ್ ಇದರ ದ.ಕ.ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Next Story