Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಮೇಶ್‌ ಕುಮಾರ್‌ ಹೇಳಿಕೆ ಆಧರಿಸಿ ತನಿಖೆ...

ರಮೇಶ್‌ ಕುಮಾರ್‌ ಹೇಳಿಕೆ ಆಧರಿಸಿ ತನಿಖೆ ನಡೆಯಲಿ: ಸಚಿವ ಡಾ. ಕೆ.ಸುಧಾಕರ್‌

ವಾರ್ತಾಭಾರತಿವಾರ್ತಾಭಾರತಿ22 July 2022 3:51 PM IST
share
ರಮೇಶ್‌ ಕುಮಾರ್‌ ಹೇಳಿಕೆ ಆಧರಿಸಿ ತನಿಖೆ ನಡೆಯಲಿ: ಸಚಿವ ಡಾ. ಕೆ.ಸುಧಾಕರ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮೂರು-ನಾಲ್ಕು ತಲೆಮಾರುಗಳಿಗಾಗುವಷ್ಟು ಸಂಪಾದನೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಜಗಜ್ಜಾಹೀರು ಮಾಡಿದ್ದಾರೆ. ಈ ಮೂಲಕ ರಮೇಶ್‌ ಕುಮಾರ್‌ ಅವರೇ ಕಾಂಗ್ರೆಸ್‌ನ ವ್ಯರ್ಥ ಹೋರಾಟಕ್ಕೆ ತಿಲಾಂಜಲಿ ನೀಡಿದ್ದಾರೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್‌ ನಾಯಕರು ಹಗರಣ, ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ಮಾಡಿದ ತಪ್ಪಿನಲ್ಲಿ ತಮ್ಮ ಪಾಲು ಇದೆ ಎಂಬುದನ್ನು ಹೇಳಿದ್ದಾರೆ. ಅನೇಕ ನಾಯಕರು ಗಾಂಧಿ ಕುಟುಂಬದ ಹೆಸರಲ್ಲಿ, ವಂಶಾಡಳಿತದಿಂದ ಸಾಕಷ್ಟು ಹಣ ಮಾಡಿದ್ದಾರೆ ಎಂದಿದ್ದಾರೆ. ರಮೇಶ್‌ ಕುಮಾರ್‌ ಅವರು ಬಹಳ ಹಿಂದಿನ ಹಿರಿಯ ನಾಯಕರು. ಸ್ಪೀಕರ್‌ ಆಗಿ ಅವರು ಹೇಗೆ ನಾಟಕವಾಡಿದರು, ಆದೇಶವನ್ನು ಮಾಧ್ಯಮಗಳ ಮುಂದೆ ಹೇಗೆ ಉಲ್ಲೇಖ ಮಾಡಿದ್ದಾರೆ ಎಂಬುದನ್ನು ಈಗಾಗಲೇ ತಿಳಿಸಿದ್ದೇನೆ. ದೇಶದಲ್ಲಿ ಯಾವ ಸ್ಪೀಕರ್‌ ಕೂಡ ಮಾಡದ ಘನಂದಾರಿ ಕೆಲಸವನ್ನು ಅವರು ಮಾಡಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದರು.

ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಯವರನ್ನು ತನಿಖೆ ಮಾಡಬಾರದು ಎಂದು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿದ್ದಾರೆ. ಈಗ ರಮೇಶ್‌ ಕುಮಾರ್‌ ಅವರ ಹೇಳಿಕೆಯಿಂದ ಹಗರಣ ನಡೆದಿರುವುದು ಸ್ಪಷ್ಟವಾಗಿದೆ. ಆದ್ದರಿಂದ ತನಿಖಾ ಏಜೆನ್ಸಿಗಳು ಕೂಡಲೇ ಇವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಬೇಕು. ರಮೇಶ್‌ಕುಮಾರ್‌ ಅವರ ಮೇಲೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಇದರಲ್ಲಿ ಯಾರೆಲ್ಲ ಶಾಮೀಲಾಗಿದ್ದರೆ ಎಂಬುದು ಹೊರ ಬರಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಚಿವರು ಆಗ್ರಹಿಸಿದರು.

ಹಿಂದೆ ಪೊಲೀಸ್‌ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ  ಬಿ ರಿಪೋರ್ಟ್‌ ಸಲ್ಲಿಸಿ ಕೆ.ಜೆ.ಜಾರ್ಜ್‌ ಅವರನ್ನು ಆರೋಪ ಮುಕ್ತಗೊಳಿಸಲಾಗಿತ್ತು. ಈಶ್ವರಪ್ಪ ಅವರ ತನಿಖೆ ಮಾಡಿದ ಸಂಸ್ಥೆಯೇ ಜಾರ್ಜ್‌ ಅವರ ತನಿಖೆಯನ್ನೂ ಮಾಡಿತ್ತು. ಇದನ್ನೂ ಕೂಡ ಕಾಂಗ್ರೆಸ್‌ ಪ್ರಶ್ನೆ ಮಾಡಲಿ. ಸರ್ಕಾರ ಏನೇ ಮಾಡಿದರೂ ಕಾಂಗ್ರೆಸ್‌ ವಿರೋಧಿಸುತ್ತದೆ ಎಂದರು.

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಒಕ್ಕಲಿಗರ ವಿಶ್ವಾಸ ಕಳೆದುಕೊಂಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನೇ ಒಕ್ಕಲಿಗರು ಬೆಂಬಲಿಸಲಿದ್ದಾರೆ. ಆದರೆ ಬಿಜೆಪಿ ಜಾತಿ ಆಧಾರಿತ ಪಕ್ಷವಲ್ಲ. ಸಮಾಜದ ಎಲ್ಲಾ ಜನವರ್ಗಗಳ ಕಲ್ಯಾಣವನ್ನು ಬಿಜೆಪಿ ಬಯಸುತ್ತದೆ. ಪರಿಶಿಷ್ಟ ಜಾತಿ ಹಾಗೂ ಪಂಗಡ, ಒಕ್ಕಲಿಗ, ಲಿಂಗಾಯಿತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಬಿಜೆಪಿ ಅಭಿವೃದ್ಧಿಯ ಭರವಸೆ ನೀಡುತ್ತದೆ ಎಂದರು.  

ಕೋವಿಡ್‌ ಸಾಂಕ್ರಾಮಿಕ ಬಂದ ಸಮಯದಲ್ಲಿ ಕೇಂದ್ರ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ನೀಡಲು ಆರಂಭಿಸಿದೆ. ಇದು ಜನಪರವಾಗಿರಬೇಕು ಹಾಗೂ ಬಡವರಿಗೆ ತಲುಪಬೇಕು. ಹೆಚ್ಚು ಅಕ್ಕಿ ಬಂದಾಗ ಅದನ್ನು ಕೆಲವರು ಮಾರಾಟ ಮಾಡಿರುವುದು ಕಂಡುಬಂದಿದೆ. ಬಡವರಿಗೆ ಕೊಡುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X