Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಚಾರಿ ವಿಜಯ್ ಅಭಿನಯದ 'ತಲೆದಂಡ' ಸೇರಿ...

ಸಂಚಾರಿ ವಿಜಯ್ ಅಭಿನಯದ 'ತಲೆದಂಡ' ಸೇರಿ ಕನ್ನಡದ 3 ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ22 July 2022 9:14 PM IST
share
ಸಂಚಾರಿ ವಿಜಯ್ ಅಭಿನಯದ ತಲೆದಂಡ ಸೇರಿ ಕನ್ನಡದ 3 ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ

ನವದೆಹಲಿ/ಬೆಂಗಳೂರು, ಜು.22: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಇಂದು ಪ್ರಕಟವಾಗಿದ್ದು, 2020ನೇ ಸಾಲಿನಲ್ಲಿ ಬಿಡುಗಡೆಯಾದ ಚಿತ್ರಗಳ ಪೈಕಿ ಕನ್ನಡದ ‘ತಲೆದಂಡ’, ‘ಡೊಳ್ಳು’, ‘ನಾದದ ನವನೀತ’ ಹಾಗೂ ತುಳುವಿನ ‘ಜೀಟಿಗೆ’ ಚಿತ್ರಗಳು ರಜತ ಕಮಲ ಪ್ರಶಸ್ತಿ ಪುರಸ್ಕಾರಕ್ಕೆ ಒಳಗಾಗಿವೆ.

ಈ ಬಾರಿ ದಕ್ಷಿಣ ಭಾರತದ ಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದು ವಿಶೇಷವಾಗಿದ್ದು, ತಮಿಳಿನ ‘ಸೂರಾರೈ ಪೊಟ್ರು’ ಚಿತ್ರದಲ್ಲಿನ ನಟನೆಗಾಗಿ ಸೂರ್ಯ ಅತ್ಯುತ್ತಮ ನಟ ಹಾಗೂ ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಹಿಂದಿಯ ‘ತಾನಾಜಿ–ದಿ ಅನ್‍ಸಂಗ್ ವಾರಿಯರ್’ ಚಿತ್ರಕ್ಕಾಗಿ ಅಜಯ್ ದೇವಗನ್ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ನಟ ಸೂರ್ಯ ಅವರ ಜೊತೆ ಹಂಚಿಕೊಂಡಿದ್ದಾರೆ. 

ನಟ ದಿ. ಸಂಚಾರಿ ವಿಜಯ್ ಅಭಿನಯದ ‘ತಲೆದಂಡ’ (ನಿರ್ದೇಶನ: ಪ್ರವೀಣ್ ಕೃಪಾಕರ್) ಚಿತ್ರವನ್ನು ಪರಿಸರ ಸಂರಕ್ಷಣೆ ಸಂಬಂಧಿತ ಅತ್ಯುತ್ತಮ ಚಲನಚಿತ್ರ ಎಂದು ಪರಿಗಣಿಸಲಾಗಿದೆ. ಪ್ರಶಸ್ತಿಯು ರಜತ ಕಮಲ ಮತ್ತು ರೂ. 1.50 ಲಕ್ಷ ನಗದು ಒಳಗೊಂಡಿದೆ. 

ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರವೂ ಅತ್ಯುತ್ತಮ ಕನ್ನಡ ಚಲನಚಿತ್ರ ವಿಭಾಗದ ಅಡಿ ರಜತ ಕಮಲಕ್ಕೆ ಭಾಜನವಾಗಿದೆ. ಪ್ರಶಸ್ತಿಯು ರೂ. 1 ಲಕ್ಷ ನಗದು ಒಳಗೊಂಡಿದೆ. ಅತ್ಯುತ್ತಮ ಧ್ವನಿಗ್ರಹಣಕ್ಕಾಗಿ(ಆಡಿಯೋಗ್ರಫಿ) ಇದೇ ಚಿತ್ರಕ್ಕೆ ಪ್ರಶಸ್ತಿ ಲಭಿಸಿದ್ದು, ರೂ. 50 ಸಾವಿರ ನಗದು ಒಳಗೊಂಡಿದೆ. 

ಸಂವಿಧಾನದ 8ನೇ ಪರಿಚ್ಛೇದದ ಅಡಿ ಹೊರತಾದ ಭಾಷೆಗಳ ಚಿತ್ರಗಳ ವಿಭಾಗದಲ್ಲಿ ತುಳು ಚಿತ್ರ ‘ಜೀಟಿಗೆ’ಗೆ (ನಿರ್ದೇಶನ: ಸಂತೋಷ್ ಮಾಡ) ರಜತ ಕಮಲ ಲಭಿಸಿದೆ. 

ಅತ್ಯುತ್ತಮ ಕಲೆ, ಸಂಸ್ಕೃತಿ ಆಧಾರಿತ ಚಿತ್ರ ವಿಭಾಗದ ಅಡಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ– ಡಾ.ಪಂಡಿತ್ ವೆಂಕಟೇಶ್‍ಕುಮಾರ್’ ರಜತ ಕಮಲ ಪ್ರಶಸ್ತಿ ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X