ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೊಂದು ಅಪಘಾತ
ರಸ್ತೆಯ ಹೊಂಡಕ್ಕೆ ಬಿದ್ದ ಕಾರು

ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ಪತ್ರಕರ್ತನ ಕಾರೊಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಮರಿಗೆ ಬಿದ್ದಿತ್ತು. ಈ ದುರ್ಘಟನೆ ಸಂಭವಿಸಿ 24 ತಾಸಿನೊಳಗೆ ಮತ್ತೊಂದು ಇಂತಹದ್ದೇ ದುರ್ಘಟನೆ ಈ ಭಾಗದಲ್ಲಿ ಸಂಭವಿಸಿದೆ.
ಇಂದು ಬೆಳಗ್ಗೆ ರಸ್ತೆಯ ಹೊಂಡಕ್ಕೆ ಬಿದ್ದ ಕಾರು ಬಳಿಕ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಕಾರು ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಎರಡು ತುಂಡಾಗಿ ರಸ್ತೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿದ್ದರಿಂದ ಕಾರು ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದು, ಅವರು ಮಣಿಪಾಲಕ್ಕೆ ಕೆಲಸಕ್ಕೆ ತೆರಳುತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story