ಸಿಬಿಎಸ್ಇ : ಬ್ಯಾರೀಸ್ ಸ್ಕೂಲ್ಗೆ ಶೇ.100 ಫಲಿತಾಂಶ

ಶಬಾನಾ, ಫಾತಿಮಾ, ರಿಂಷಾ
ಕುಂದಾಪುರ : ಕೋಡಿಯ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ (ಸಿಬಿಎಸ್ಇ) ಶೈಕ್ಷಣಿಕ ವರ್ಷದ 10ನೆ ತರಗತಿಯ ಪರೀಕ್ಷೆಯಲ್ಲಿ ಸತತ ನಾಲ್ಕನೇ ವರ್ಷ ಶೇ.100 ಫಲಿತಾಂಶ ದಾಖಲಿಸಿದೆ.
ವಿದ್ಯಾರ್ಥಿಗಳಾದ ಶಬಾನಾ ಬಾನು ಶೇ.89, ಫಾತಿಮಾ ಶೇಕ್ ಶೇ.88.16, ರಿಂಷಾ ನಾಝ್ ಶೇ.84 ಅಂಕ ಗಳಿಸುವುದರ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಹಾಗೆಯೇ 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ.
ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಬ್ಯಾರಿ, ಬ್ಯಾರಿಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್, ನಿರ್ದೇಶಕ ದೋಮ ಚಂದ್ರಶೇಖರ್, ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ರಕ್ಷಕ- ಶಿಕ್ಷಕ ಸಂಘದ ಸದಸ್ಯರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
Next Story