ಮಂಗಳೂರು; ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ
ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿ ಬಸ್ ಟೈಮಿಂಗ್ಸ್ ವಿಚಾರದಲ್ಲಿ ಎರಡು ಬಸ್ಸಿನ ಚಾಲಕರು ಮತ್ತು ನಿರ್ವಾಹಕರು ಹೊಡೆದಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.
ಬೆಂದೂರ್‌ವೆಲ್ ಬಸ್ ನಿಲ್ದಾಣದ ಬಳಿ ಎರಡು ಖಾಸಗಿ ಬಸ್‌ಗಳ ಚಾಲಕ ಮತ್ತು ನಿರ್ವಾಹಕರು ಟೈಮಿಂಗ್ಸ್ ವಿಚಾರವಾಗಿ ಬೈದಾಡಿ ಹೊಡೆದಾಡಿಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಕದ್ರಿ ಪೊಲೀಸರು ಸಾರ್ವಜನಿಕರ ನೆಮ್ಮದಿಗೆ ಭಂಗವನ್ನುಂಟು ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story