ಭಾರತ ಸೇವಾದಳಕ್ಕೆ ಬಶೀರ್ ಬೈಕಂಪಾಡಿ ನೇಮಕ

ಮಂಗಳೂರು : ಭಾರತ ಸೇವಾದಳದ ದ.ಕ.ಜಿಲ್ಲಾಧ್ಯಕ್ಷರಾಗಿದ್ದ ಮಂಗಳೂರು ಮನಪಾ ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ ಭಾರತ ಸೇವಾ ದಳದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಭಾರತ ಸೇವಾದಳದ ದ.ಕ. ಜಿಲ್ಲಾ ಸಮಿತಿಗೆ ಎರಡು ಅವಧಿಗೆ ಅಧ್ಯಕ್ಷರಾಗಿದ್ದ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಸಿಲೆಬಸ್ ಕಮಿಟಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Next Story