ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಪುತ್ರನಿಗೆ ಸ್ಥಾನ ಬಿಟ್ಟುಕೊಡುವೆ: ಕೆ.ಬಿ.ಕೋಳಿವಾಡ

ಹಾವೇರಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ನನ್ನ ಮಗ ಪ್ರಕಾಶ್ ಕೋಳಿವಾಡಗೆ ಟಿಕೆಟ್ ಕೊಡುವಂತೆ ಹೈಕಮಾಂಡ್ ಗೆ ಕೇಳಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.
ಇಲ್ಲಿನ ವಾಗೀಶನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, 'ಹೈಕಮಾಂಡ್ ಟಿಕೆಟ್ ಕೊಟ್ಟರೆ ಖಂಡಿತ ಪ್ರಕಾಶ್ ಆರಿಸಿ ಬರುತ್ತಾರೆ. ಮಗನಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ನಾಯಕರೇ ಭರವಸೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಚುನಾವಣೆಗಳಿಂದ ನಾನು ಹಿಂದೆ ಸರಿದಿದ್ದೇನೆ' ಎಂದರು.
'ರಾಣೆಬೆನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ರಾಜ್ಯದ ಚುನಾವಣಾ ಕ್ಷೇತ್ರದಿಂದ ಹಿಂದಕ್ಕೆ ಸರಿದು ನನ್ನ ಮಗನನ್ನು ಮುಂದಕ್ಕೆ ತರಲು ಪ್ರಯತ್ನ ಮಾಡುತ್ತಿದ್ದೇನೆ' ಎಂದು ತಿಳಿಸಿದ್ದಾರೆ.
Next Story





