ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣ: 9 ವರ್ಷದಿಂದ ತಲೆ ಮರೆಸಿದ್ದ ಆರೋಪಿಯ ಬಂಧನ
ಬಜ್ಪೆ, ಜು.24: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣವೊಂದರಲ್ಲಿ ಪೊಲೀಸರಿಂದ 9 ವರ್ಷ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬಜ್ಪೆ ನಿವಾಸಿ ಸದ್ಯ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸವಿರುವ ನೌಶಾದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಈತ 2013ರ ಮಾ.22ರಂದು ಮಹಿಳೆಯ ಚೂಡಿದಾರದ ಶಾಲನ್ನು ಎಳೆದು ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಈ ಕುರಿತು ಮಹಿಳೆ ದೂರು ನೀಡಿದ್ದು, ಪ್ರಕರಣ ಹಿಂಪಡೆಯುವಂತೆ ನೌಶಾದ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಎಂದು ಮಹಿಳೆ ಮತ್ತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿತ್ತು.
ಆರೋಪಿ ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ದಾಳಿ ಮಾಡಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story





