Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಲೇಡಿಹಿಲ್ ನಲ್ಲಿ ನಾರಾಯಣ ಗುರು...

ಮಂಗಳೂರು: ಲೇಡಿಹಿಲ್ ನಲ್ಲಿ ನಾರಾಯಣ ಗುರು ವೃತ್ತಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ24 July 2022 1:56 PM IST
share
ಮಂಗಳೂರು: ಲೇಡಿಹಿಲ್ ನಲ್ಲಿ ನಾರಾಯಣ ಗುರು ವೃತ್ತಕ್ಕೆ ಶಿಲಾನ್ಯಾಸ

ಮಂಗಳೂರು, ಜು.24: ನಗರದ ಲೇಡಿ ಹಿಲ್ ಶಾಲೆಯ ಹತ್ತಿರ ಇರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ರವಿವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ  ಅವರು, ಮಂಗಳೂರಿನ ಪ್ರಮುಖ ರಸ್ತೆಗೆ ಈ ಹಿಂದೆಯೇ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನು ನಾಮಕರಣ ಮಾಡಲಾಗಿತ್ತು. ಈಗ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಸುಂದರವಾದ ನಾರಾಯಣ ಗುರು ವೃತ್ತವನ್ನು ನಿರ್ಮಿಸಲು ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶವನ್ನು ಬೇರೆ ಬೇರೆ ಆಯಾಮಗಳಲ್ಲಿ ಪ್ರಕಟಿಸುವಂತಹ ಕಾರ್ಯವನ್ನು  ಜಾರಿಗೊಳಿಸಲಾಗುತ್ತಿದೆ, ಇಲ್ಲಿ ವೃತ್ತ ಹಾಗೂ ಅವರ ಸುಂದರ ಪುತ್ಥಳಿ ನಿರ್ಮಿಸಲಾಗುವುದು, ಮುಂದಿನ ನವರಾತ್ರಿಗೆ ನಿರ್ಮಾಣ ಕಾಮಗಾರಿ ಪೂರ್ಣವಾಗಲಿದೆ ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎನ್ನುವ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿದೆ, ಅದಕ್ಕೆ ಪೂರಕವಾಗಿ ಸ್ವಾತಂತ್ರ್ಯದ ಹೋರಾಟಕ್ಕೆ ಕರ್ನಾಟಕದ ಕೊಡುಗೆಯನ್ನು ಜನಮಾನಸಕ್ಕೆ ತಿಳಿಸಿಕೊಡಲಾಗುತ್ತಿದೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ರಂಗಾಯಣದ ಮೂಲಕ ಕರ್ನಾಟಕದ ಹೋರಾಟಗಳನ್ನು ತಿಳಿಸುವ ನಾಟಕ, ಚಲನಚಿತ್ರ ಪ್ರದರ್ಶನಗಳು, ಕರ ಪತ್ರಗಳ ಹಂಚಿಕೆ, ರಥಯಾತ್ರೆ ನಡೆಯುತ್ತಿದೆ ಎಂದರು.

ಆಗಸ್ಟ್ 12 ರಿಂದ ಎಲ್ಲಾ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಬೇಕು, ಕರ್ನಾಟಕದಲ್ಲಿ ಒಂದು ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಬೇಕು, ಈ ಸಂದರ್ಭದಲ್ಲಿ ರಾಷ್ಟ್ರಧ್ವಜದ ದೊಡ್ಡ ದೊಡ್ಡ ಮೆರವಣಿಗೆಗಳನ್ನು ನಡೆಸುವಂತೆ ಅವರು ಯುವಜನತೆಗೆ ಕರೆ ನೀಡಿದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ಜನಪ್ರತಿನಿಧಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X