ಉಳಾಯಿಬೆಟ್ಟು: ಕಲ್ಲಿನಕೋರೆಯ ನೀರಿನಲ್ಲಿ ಮುಳುಗಿ ಯುವಕ ಮೃತ್ಯು

ಶಿಯಾಝ್
ಮಂಗಳೂರು: ಕಲ್ಲಿನ ಕೋರೆಗೆ ಈಜಲು ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ರವಿವಾರ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ.
ಜೋಕಟ್ಟೆಯ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (21) ಮೃತ ಯುವಕ ಎಂದು ಪ್ರಕರಣ ದಾಖಲಿಸಿರುವ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ರವಿವಾರ ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆಯ ವೇಳೆಗೆ ತನ್ನ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವುನಲ್ಲಿರುವ ಕಲ್ಲಿನ ಕೋರೆಗೆ ಈಜಲು ಇಳಿದಿದ್ದರು. ಈ ಸಂದರ್ಭ ಕೋರೆಯ ಆಳ ತಿಳಿಯದೆ ಈಜಲು ಮುಂದಾಗಿದ್ದು, ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
Next Story






.jpeg)


