Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಲಿತರ ದೂರುಗಳಿಗೆ ಸ್ಪಂದಿಸಲು ಡಿಸಿಪಿ...

ದಲಿತರ ದೂರುಗಳಿಗೆ ಸ್ಪಂದಿಸಲು ಡಿಸಿಪಿ ದಿನೇಶ್ ಕುಮಾರ್ ಸೂಚನೆ

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಎಸ್ಸಿ-ಎಸ್ಟಿ ಮಾಸಿಕ ಸಭೆ

ವಾರ್ತಾಭಾರತಿವಾರ್ತಾಭಾರತಿ24 July 2022 8:40 PM IST
share
ದಲಿತರ ದೂರುಗಳಿಗೆ ಸ್ಪಂದಿಸಲು ಡಿಸಿಪಿ ದಿನೇಶ್ ಕುಮಾರ್ ಸೂಚನೆ

ಮಂಗಳೂರು: ದಲಿತರ ದೂರುಗಳನ್ನು ತಾಳ್ಮೆಯಿಂದ ಆಲಿಸಬೇಕು ಮತ್ತು ಸಮಸ್ಯೆಗೆ ಸ್ಪಂದಿಸುವ ಮನೋಭಾವ ಬೆಳೆಸಬೇಕು ಎಂದು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರವಿವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮಾಸಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು.

‘ದಲಿತರು ಠಾಣೆಗೆ ತೆರಳಿದಾಗ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ದಲಿತ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಾರೆ’ ಎಂದು ದಲಿತ ಸಂಘಟನೆಯ ಮುಖಂಡ ಚಂದ್ರು ಸಹಿತ ಹಲವು ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ  ಡಿಸಿಪಿ ‘ಠಾಣೆಗೆ ದೂರು ನೀಡಲು ಬರುವವರನ್ನು ವಿನಾ ಕಾರಣ ಸತಾಯಿಸಬಾರದು. ಅವರನ್ನು ಕುಳ್ಳಿರಿಸಿ, ಅವಲ ಅಹವಾಲು ಕೇಳಿ ದೂರು ಸ್ವೀಕರಿಸಿ ತನಿಖೆ ಕೈಗೊಳ್ಳಬೇಕು. ದೂರು ನೀಡಲು ಬಂದವರಿಗೆ ಸ್ಪಂದಿಸದಿದ್ದರೆ ಅಂತಹ ಠಾಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ನಗರದ ಕಂಕನಾಡಿ ಮತ್ತಿತರ ಕಡೆಗಳಲ್ಲಿ ರಾತ್ರಿ ಗಸ್ತು ಇಲ್ಲದ ವೇಳೆ ಗಾಂಜಾ ಸೇವನೆ ಮತ್ತಿತರ ಪ್ರಕರಣಗಳು ನಡೆಯುತ್ತಿವೆ. ಇದನ್ನು ಪೊಲೀಸ್ ಇಲಾಖೆ ಗಂಭೀರ ಪರಿಗಣಿಸಬೇಕು ಎಂದು ದಲಿತ ಮುಖಂಡ ಅನಿಲ್ ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಡಿಸಿಪಿ ದಿನೇಶ್ ಕುಮಾರ್ ಗಾಂಜಾ ಸೇವನೆ ಪತ್ತೆಯಾದರೆ ೧೦ ಸಾವಿರ ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ನಗರ ಪ್ರದೇಶದಲ್ಲಿ ಗಾಂಜಾ ಸೇರಿದಂತೆ ಯಾವುದೇ ಚಟುವಟಿಕೆ ಕಂಡುಬಂದರೆ ಸಹಾಯವಾಣಿಗೆ (112) ಕರೆ ಮಾಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿರಿಸಲಾ ಗುವುದು ಎಂದರು.

ಕೊಳವೆ ಬಾವಿ ಸಹಿತ ವಿವಿಧ ಯೋಜನೆಗಳ ಮಂಜೂರಾತಿಯ ಅಧಿಕಾರವನ್ನು ಜಿಲ್ಲಾಧಿಕಾರಿಯಿಂದ ಶಾಸಕರಿಗೆ ಸರಕಾರ ನೀಡಿದೆ. ಇದರಿಂದ ಫಲಾನುಭವಿಯ ಆಯ್ಕೆಯಲ್ಲಿ ರಾಜಕೀಯ ನುಸುಳುವ ಸಾಧ್ಯತೆ ಇದೆ. ಸುಳ್ಯದಲ್ಲಿ ಸಚಿವರೊಬ್ಬರ ಆಪ್ತ ಸಹಾಯಕ ತಮ್ಮ ಪಕ್ಷದ ಮತದಾರ ಅಲ್ಲ ಎನ್ನುವ ಕಾರಣಕ್ಕೆ ಅರ್ಹ ಫಲಾನುಭವಿಯನ್ನು ಸವಲತ್ತಿನಿಂದ ವಂಚಿಸಿದ್ದಾರೆ ಎಂಬ ಆರೋಪವಿದೆ. ಹಾಗಾಗಿ ಈ ಹಿಂದಿನಂತೆಯೇ ಜಿಲ್ಲಾಧಿಕಾರಿಗೆ ಫಲಾನುಭವಿಗಳ ಆಯ್ಕೆಯ ಜವಾಬ್ದಾರಿಯನ್ನು ನೀಡಬೇಕು ಎಂದು ಎಸ್‌ಪಿ ಆನಂದ ಆಗ್ರಹಿಸಿದರು.

*ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಲಿತರಿಗೆ ಮೀಸಲಿಟ್ಟ ಕಾಮಗಾರಿ ಗುತ್ತಿಗೆಯನ್ನು ಹೊರ ಜಿಲ್ಲೆ, ಹೊರ ರಾಜ್ಯಗಳ ದಲಿತರಲ್ಲದವರು ಪಡೆದುಕೊಂಡು ವಂಚಿಸಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಪಡೆದ ಓರ್ವ ಗುತ್ತಿಗೆದಾರನನ್ನು ಈಗಾಗಲೇ ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಇಂತಹ ಇನ್ನೂ ಕೆಲವರು ಈ ಅಕ್ರಮದಲ್ಲಿ ಭಾಗಿಯಾಗಿದ್ದು ಅವರ  ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಎಸ್‌ಪಿ ಆನಂದ ಒತ್ತಾಯಿಸಿದರು.

*ಮಹಿಳೆಯೊಬ್ಬರು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣಪತ್ರ ಪಡೆದು ಕೆಐಒಸಿಎಲ್‌ನಲ್ಲಿ ಸುಮಾರು ೨೦ ವರ್ಷ ಉದ್ಯೋಗ ಮಾಡಿದ್ದರು. ಈ ವಿಚಾರ ಬಹಿರಂಗಗೊಂಡ ಬಳಿಕ ಅವರು ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಬೇಕು ಎಂದು ಸದಾಶಿವ ಉರ್ವಸ್ಟೋರ್ ಒತ್ತಾಯಿಸಿದರು.

*ಕರ್ತವ್ಯ ನಿರತ ಸಂಚಾರ ಪೊಲೀಸರು ಸದಾ ಮೊಬೈಲ್‌ನಲ್ಲೇ ತಲ್ಲೀನರಾಗಿರುತ್ತಾರೆ. ಅಲ್ಲದೆ ಆಟೋ ರಿಕ್ಷಾ ಚಾಲಕರು, ಬಸ್ ಚಾಲಕರು ಮೊಬೈಲ್ ಬಳಕೆ ಮಾಡಿಕೊಂಡೇ ವಾಹನ ಚಲಾಯಿಸುತ್ತಿದ್ದಾರೆ. ಇದು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ದಲಿತ ಮುಖಂಡರು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ದಿನೇಶ್ ಕುಮಾರ್ ಇಂತಹ ಆರೋಪಗಳ ಪದೇ ಪದೇ ‘ಸಾರ್ವಜನಿಕರಿಂದ ಕೇಳಿಬರುತ್ತಿದೆ.  ಕರ್ತವ್ಯ ವೇಳೆ ಅನಾವಶ್ಯಕವಾಗಿ ಮೊಬೈಲ್ ಬಳಸುವ ಸಿಬ್ಬಂದಿಯ ಮೊಬೈಲ್ ವಶಪಡಿಸಿ ಕೊಳ್ಳಬೇಕು’ ಎಂದು ತನ್ನ ಅಧೀನ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಹನ ಚಾಲಕರು ಮೊಬೈಲ್ ಬಳಕೆ ಸಹಿತ ಸಂಚಾರ ನಿಯಮ ಉಲ್ಲಂಘಿಸುತ್ತಿರುವುದು ಕಂಡುಬಂದರೆ ಸಾರ್ವಜನಿಕರು ಪೊಟೋ ತೆಗೆದು ಪೊಲೀಸರಿಗೆ ಕಳುಹಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಡಿಸಿಪಿ ದಿನೇಶ್ ಕುಮಾರ್ ಹೇಳಿದರು.

ಚೆಂಬುಗುಡ್ಡೆ ಸ್ಮಶಾನದ ಬಳಿ ಕೊರಗ ಸಮುದಾಯಕ್ಕೆ ಮೀಸಲಿಟ್ಟ ಜಾಗವನ್ನು ವ್ಯಕ್ತಿಯೊಬ್ಬರು ಮಾರಾಟ ಮಾಡಿದ್ದಾರೆ. ನಗರದ ಕೋಡಿಕಲ್, ಉರ್ವ ಮತ್ತಿಯರ ಗಾಂಜಾ ಮಾರಾಟ ಪ್ರಕರಣಗಳ ಹೆಚ್ಚಳವಾಗುತ್ತಿದೆ ಇತ್ಯಾದಿ ಆರೋಪಗಳಲ್ಲದೆ ನಗರದ ಜ್ಯೋತಿ ಬಳಿ ಅಂಬೇಡ್ಕರ್ ವೃತ್ತ ಶೀಘ್ರ ನಿರ್ಮಿಸಬೇಕು ಎಂದು ಸಭೆಯಲ್ಲಿ ಒತ್ತಾಯ ಕೇಳಿ ಬಂದವು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಚಂದ್ರ ಕುಮಾರ್, ಅನಿಲ್ ಉರ್ವಸ್ಟೋರ್, ವಿಶ್ವನಾಥ್, ಗಿರೀಶ್, ಅಮಲಾ ಜ್ಯೋತಿ, ಜಗದೀಶ್ ಪಾಂಡೇಶ್ವರ, ಸುನಿಲ್ ಗಂಜಿಮಠ ಅಹವಾಲುಗಳನ್ನು ಮಂಡಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X