Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡ್ಡ ಕುಸಿತದ ಸೀಮೆಹುಲ್ಲು ಕಜೆ...

ಗುಡ್ಡ ಕುಸಿತದ ಸೀಮೆಹುಲ್ಲು ಕಜೆ ಪ್ರದೇಶಕ್ಕೆ ಸಚಿವ ಬಿ.ಸಿ.ನಾಗೇಶ್ ಭೇಟಿ

ಸುರಕ್ಷಿತ ಸ್ಥಳಕ್ಕೆ ತೆರಳಲು ನಿವಾಸಿಗಳಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ24 July 2022 8:43 PM IST
share
ಗುಡ್ಡ ಕುಸಿತದ ಸೀಮೆಹುಲ್ಲು ಕಜೆ ಪ್ರದೇಶಕ್ಕೆ ಸಚಿವ ಬಿ.ಸಿ.ನಾಗೇಶ್ ಭೇಟಿ

ಮಡಿಕೇರಿ: ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ರವಿವಾರ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಪಡೆದರು. 

ಈ ಪ್ರದೇಶದಲ್ಲಿ ಮೂರು ಕುಟುಂಬಗಳು ವಾಸಮಾಡುತ್ತಿದ್ದಾರೆ. ಸದ್ಯ ಮಳೆಗಾಲ ಮುಗಿಯುವ ವರೆಗೆ ಸಂಬಂಧಿಕರ ಮನೆಗೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಮಾಡಿದರು. 

ಜಾನುವಾರುಗಳಿಗೂ ಮೇವು ಒದಗಿಸಲಾಗುವುದು, ತಮ್ಮ ಜೀವ ಮತ್ತು ಜೀವನ ಅತಿಮುಖ್ಯವಾಗಿದೆ. ಆ ನಿಟ್ಟಿನಲ್ಲಿ  ಕೂಡಲೇ ಸ್ಥಳಾಂತರ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು.  

ಸಂತ್ರಸ್ತರಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು. ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಸದ್ಯ ಸ್ಥಳಾಂತರ ಆಗುವುದು ಒಳ್ಳೆಯದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೋರಿದರು.  

ಮುಂಗಾರು ಸಂದರ್ಭದಲ್ಲಿ 2018 ರಲ್ಲಿ ಇದೇ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿತ್ತು, ಈ ಬಾರಿಯೂ ಇದೇ ಸ್ಥಳದಲ್ಲಿ ಭೂ ಕುಸಿತ ಸಂಭವಿಸಿದೆ. ಆದ್ದರಿಂದ ಮಳೆಗಾಲ ಮುಗಿದ ನಂತರ ತಜ್ಞರ ತಂಡ ಆಹ್ವಾನಿಸಿ, ವರದಿ ಪಡೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. 

2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಇಲ್ಲಿನ ಜನರು ಸಂಕಷ್ಟ ಅನುಭವಿಸಿದ್ದಾರೆ. ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿರುವ ಬಗ್ಗೆ ಮತ್ತೊಂದು ಬಾರಿ ತಜ್ಞರಿಂದ ಅಧ್ಯಯನ ವರದಿ ಪಡೆಯಲಾಗುವುದು ಎಂದು ಬಿ.ಸಿ.ನಾಗೇಶ್ ಅವರು ತಿಳಿಸಿದರು. 
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಿಕರ ಮನೆಗೆ ತೆರಳಿದ್ದಲ್ಲಿ ಸಂಬಂಧಿಕರು ಸೇರಿದಂತೆ ಸಂತ್ರಸ್ತರಿಗೆ ಆಹಾರ ಕಿಟ್ ಸೇರಿದಂತೆ ಅಗತ್ಯ ನೆರವು ನೀಡಲಾಗುವುದು, ಸದ್ಯ ಆಗಸ್ಟ್ ಅಂತ್ಯದ ವರೆಗೆ ಸಂಬಂಧಿಕರ ಮನೆಯಲ್ಲಿ ಇರುವಂತೆ ಸ್ಥಳಿಯರಲ್ಲಿ ಕೋರಿದರು.  

ನಂತರ ಜೊಡುಪಾಲ ಸಮೀಪದಲ್ಲಿ ಮಳೆ ಹಾನಿಗೆ ತುತ್ತಾದ ಸೇತುವೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಪರಿಶೀಲಿಸಿದರು. ಸೇತುವೆಯನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸೂಚಿಸಿದರು. 

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶಿಲ್ದಾರ್ ಮಹೇಶ್ ಇತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X