ವಕೀಲರಿಗೆ ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮ

ಉಡುಪಿ : ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗ ದೊಂದಿಗೆ ಉಡುಪಿ ವಕೀಲರ ಸಂಘದ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಇತ್ತೀಚೆಗೆ ಆಯೋಜಿಸ ಲಾದ ಬೂಸ್ಟರ್ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ್ ಶಿವಪ್ಪ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್ ಭಟ್, ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಉಪಾಧ್ಯಕ್ಷ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯೆ ಅಮೃತಕಲಾ, ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಬದರಿನಾಥ್ ನಾಯರಿ ಮೊದಲಾದವರು ಉಪಸ್ಥಿತರಿದ್ದರು.
Next Story





