ಸಿ.ಟಿ. ರವಿ ಭಾವಚಿತ್ರದ ಫ್ಲೆಕ್ಸ್ ಅಳವಡಿಕೆ: ಇಬ್ಬರ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು, ಜು.24: ಬಿಜೆಪಿ ನಾಯಕ ಸಿ.ಟಿ. ರವಿ ಅವರ ಹುಟ್ಟುಹಬ್ಬದ ಹಿನ್ನೆಲೆ ಶುಭಾಶಯ ಕೋರಿ ವಿಧಾನಸೌಧದ ಎದುರು ಫ್ಲೆಕ್ಸ್ ಅಳವಡಿಸಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿ.ಕಿಶನ್‍ಗೌಡ ಹಾಗೂ ಎಲ್.ನರೇಂದ್ರ ಎಂಬುವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.
ಹೈಕೋರ್ಟ್ ಎದುರಿಗಿರುವ ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಜುಲೈ 18ರಂದು ಫ್ಲೆಕ್ಸ್ ಅಳವಡಿಸಲಾಗಿತ್ತು. ಈ ಮೂಲಕ ಹೈಕೋರ್ಟ್ ಆದೇಶ ಹಾಗೂ ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘನೆ ಆಗಿರುವುದಾಗಿ ಗೀತಾ ಮಿಶ್ರಾ ಎಂಬುವರು ನೀಡಿದ ದೂರಿನನ್ವಯ ಮೊಕದ್ದಮೆ ದಾಖಲಿಸಲಾಗಿದ್ದು, ಇಬ್ಬರಿಗೂ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





