Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ...

ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ24 July 2022 10:06 PM IST
share
ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು ಜು.24: ಕರ್ನಾಟಕ ರಾಜ್ಯವು ಗುಣಮಟ್ಟದ, ತಾಂತ್ರಿಕ, ಉದ್ಯೋಗ ಆಧಾರಿತ ಶಿಕ್ಷಣವನ್ನು ನೀಡುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಬೆಂಗಳೂರು ನಗರ ಪ್ರಸ್ತುತ ಶಿಕ್ಷಣದ ಕೇಂದ್ರವಾಗಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಬೆಂಗಳೂರಿನ ತಾವರೆಕೆರೆ ಯೆಲ್ಲಾಚಗುಪ್ಪೆ ಗ್ರಾಮದಲ್ಲಿ ಬಂಟ್ಸ್ ಸಂಘ ಬೆಂಗಳೂರು ವತಿಯಿಂದ ಹೊಸದಾಗಿ ನಿರ್ಮಿಸಲಾದ ಆರ್‍ಎನ್‍ಎಸ್ ವಿದ್ಯಾನಿಕೇತನ ಕ್ಯಾಂಪಸ್-2 ಎರಡನೆಯ ಲಾಂಛನ ಹಾಗೂ ಫಲಕವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. 

ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಆರ್‍ಎನ್‍ಎಸ್ ಶಿಕ್ಷಣ ಸಂಸ್ಥೆ, ಸುಮಾರು 9 ಎಕರೆ ಪ್ರದೇಶದಲ್ಲಿ ಮಾಲಿನ್ಯ ಮುಕ್ತ ಪರಿಸರದಲ್ಲಿ ಅತ್ಯಾಧುನಿಕ ಸಂಪೂರ್ಣ ಸುಸಜ್ಜಿತ ಕ್ಯಾಂಪಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸ, ಕ್ರೀಡೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಇದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿಯೂ ಸದೃಢರಾಗುತ್ತಾರೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳನ್ನು ಬಳಸಿಕೊಂಡು ನೀವು ಶ್ರೇಷ್ಠ ಭಾರತ, ನವ ಭಾರತ-ನವ ಕರ್ನಾಟಕ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಬಹುದು ಮತ್ತು ಇವುಗಳ ಮೂಲಕ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು. ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಸ್ವಾತಂತ್ರ್ಯದ ಪಯಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದಲ್ಲಿನ ಅಸಮಾನ ಕುಸಿತದಿಂದಾಗಿ ಇಂದು ನಾವು ಪರಿಸರ ಸಂಬಂಧಿತ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯು ಪರಿಸರ ಸಂರಕ್ಷಣೆಯ ಬಗ್ಗೆ ಯೋಚಿಸುವಂತೆ ಒತ್ತಾಯಿಸಿದೆ. ಪ್ರಕೃತಿಯ ಬಗ್ಗೆ ಪ್ರೀತಿ ಗೌರವ, ಸರಳ ಜೀವನ ವಿಧಾನ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು ಎಂದು ಹೇಳಿದರು.

ರಾಷ್ಟ್ರದ ಹೊಸ ಶಿಕ್ಷಣ ನೀತಿಯು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ ಮತ್ತು ಅಂತಹ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ. ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ, ಹೊಸ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆ ಮತ್ತು ಕ್ರೀಡೆಗೆ ಆದ್ಯತೆ ನೀಡಲು ಅವಕಾಶವಿದೆ. ಈ ನಿಟ್ಟಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪರಮ ಪೂಜ್ಯ ಸುಭುದೇಂದ್ರ ಸ್ವಾಮೀಜಿ, ಸಚಿವ ಸಿ.ಟಿ. ರವಿ, ಜಿತೇಂದ್ರ ಗೆಹ್ಲೋಟ್, ಬಂಟ್ಸ್ ಸಂಘದ ಆರ್‍ಎನ್‍ಎಸ್ ವಿದ್ಯಾನಿಕೇತನ ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಕರ್ನಾಟಕದ ಮಾಜಿ ಲೋಕಾಯುಕ್ತ, ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಮಿಸ್ ಇಂಡಿಯಾ 2022 ಸಿನಿ ಶೆಟ್ಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X