Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ...

ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ ಬಹು ಕೋಟಿ ರೂ. ಸರಕಾರಿ ಜಮೀನು ಮಂಜೂರು

ಉಳ್ಳಾಲ ಕೊಣಾಜೆ ಗ್ರಾಮ ಪಂಚಾಯತ್, ಗ್ರಾಮ ಸಭೆ ನಿರ್ಣಯಗಳ ಉಲ್ಲಂಘನೆ

ಜಿ.ಮಹಾಂತೇಶ್ಜಿ.ಮಹಾಂತೇಶ್25 July 2022 8:45 AM IST
share
ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ ಬಹು ಕೋಟಿ ರೂ. ಸರಕಾರಿ ಜಮೀನು ಮಂಜೂರು

ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರ ಒತ್ತಡಕ್ಕೆ ಮಣಿದು ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ ಚಾಲ್ತಿಯಲ್ಲಿರುವ ಮಾರುಕಟ್ಟೆ ದರದ ಶೇ.25ರಷ್ಟು ದರದಲ್ಲಿ 2 ಎಕರೆ ಜಮೀನು ಮಂಜೂರು ಮಾಡಲು  ಮುಂದಾಗಿದೆ. ಈ ಸಂಬಂಧ ಸಚಿವ ಸಂಪುಟಕ್ಕೆ ಕಂದಾಯ ಇಲಾಖೆಯು ಪ್ರಸ್ತಾವನೆ ಸಲ್ಲಿಸಿರುವುದು ತಿಳಿದು ಬಂದಿದೆ. ಕಂದಾಯ ಇಲಾಖೆಯು ಸಚಿವ ಸಂಪುಟದ ಮುಂದೆ ಸಲ್ಲಿಸಿರುವ ಪ್ರಸ್ತಾವನೆಯ ಪ್ರತಿಯು ‘the-file.in’, ‘ವಾರ್ತಾಭಾರತಿ’ಗೆ ಲಭ್ಯವಾಗಿದೆ.

ಬೆಂಗಳೂರು, ಜು.25: ಗ್ರಾಮ ಪಂಚಾಯತ್‌ಗಳು ನಡೆಸುವ ಗ್ರಾಮಸಭೆ ಮತ್ತು ಸಾಮಾನ್ಯ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳನ್ನು ವಿರೋಧಿಸಿ ರಾಜ್ಯ ಸರಕಾರವು ಖಾಸಗಿ ಟ್ರಸ್ಟ್, ಸಂಘ ಸಂಸ್ಥೆಗಳಿಗೆ ಬಹುಕೋಟಿ ಬೆಲೆಬಾಳುವ ಸರಕಾರಿ ಜಮೀನುಗಳನ್ನು ಮಂಜೂರು ಮಾಡಲು ಹಲವು ಪ್ರಸ್ತಾವನೆಗಳು ಸಚಿವ ಸಂಪುಟಕ್ಕೆ ಸಲ್ಲಿಕೆಯಾಗಿರುವುದು ಬಹಿರಂಗವಾಗಿವೆ.  

ಸಂಘ ಪರಿವಾರ ಮತ್ತು ಬಿಜೆಪಿ ಶಾಸಕರ ಪ್ರಭಾವವನ್ನು ಬಳಸುತ್ತಿರುವ ಖಾಸಗಿ ಟ್ರಸ್ಟ್, ಸಂಘ ಸಂಸ್ಥೆಗಳು ಸರಕಾರಿ ಜಮೀನು ಮಂಜೂರಾತಿಗೆ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಕಂದಾಯ ಇಲಾಖೆಯು ಅತ್ಯುತ್ಸಾಹದಿಂದ ಸಚಿವ ಸಂಪುಟದ ಮುಂದಿರಿಸಿ ಗ್ರಾಮ ಪಂಚಾಯತ್‌ಗಳ ಅಧಿಕಾರ ಮೊಟಕುಗೊಳಿಸುತ್ತಿರುವುದು ಮುನ್ನೆಲೆಗೆ ಬಂದಿದೆ. 

ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 27ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ಸರ್ವೇ ನಂಬರ್ 149ರಲ್ಲಿ  ಗ್ರಾಮೀಣ ಪ್ರದೇಶದ 2.00 ಎಕರೆ ಜಮೀನನ್ನು ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರ ಹೆಸರಿಗೆ ಭೂ ಮಂಜೂರಾತಿ ನಿಯಿಮಗಳು 1969ರ ನಿಯಮ 22ಎ (1)(i)(3) ಅನ್ವಯ ಜಮೀನಿನ ಮಾರುಕಟ್ಟೆ ಮೌಲ್ಯದ ಶೇ.25ರಷ್ಟು ಮತ್ತು ಇನ್ನಿತರ ಶಾಸನಬದ್ಧ ಶುಲ್ಕಗಳನ್ನು ವಿಧಿಸಿ ಮಂಜೂರು ಮಾಡಬೇಕು ಎಂದು ಕಂದಾಯ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. 

ಆದರೆ, ಈ ಪ್ರಸ್ತಾವನೆಯು ಸಚಿವ ಸಂಪುಟದ ಮುಂದೆ ಬರುವ ಮುನ್ನವೇ ಮಂಗಳೂರಿನ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು 2 ಎಕರೆ ಜಮೀನು ಮಂಜೂರು ಮಾಡಲು ಸಲ್ಲಿಸಿದ್ದ ಪ್ರಸ್ತಾವನೆಯನ್ನು  ಕೊಣಾಜೆ ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆ ಮತ್ತು ಗ್ರಾಮ ಸಭೆಯು ತಿರಸ್ಕರಿಸಿತ್ತು. ಅಲ್ಲದೆ ಜಮೀನು ಮಂಜೂರು ಮಾಡಲು ಪಂಚಾಯತಿಯು ನಿರಾಕ್ಷೇಪಣ ಪತ್ರ (ಎನ್‌ಒಸಿ)ವನ್ನು ನೀಡಿಲ್ಲ ಎಂದು ಗೊತ್ತಾಗಿದೆ.
ಆದರೂ ಬಿಜೆಪಿ ಶಾಸಕರೊಬ್ಬರ ಒತ್ತಡಕ್ಕೆ ಮಣಿದು ಜಮೀನು ಮಂಜೂರಾತಿಯ ಪ್ರಸ್ತಾವನೆಯನ್ನು ನೇರವಾಗಿ ಸಚಿವ ಸಂಪುಟದ ಮುಂದಿರಿಸಲಾಗಿದೆ.

ಅಲ್ಲದೆ ಈ ಸಂಬಂಧ ಪಂಚಾಯತ್‌ನಲ್ಲಿ ನಡೆದ ಮೊದಲ ಸಭೆಯಲ್ಲಿ ಒಕ್ಕೊರಲಿನಿಂದ ವಿರೋಧ ವ್ಯಕ್ತವಾಗಿತ್ತು. ಒಂದು ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಮುಂದಿನ 6 ತಿಂಗಳವರೆಗೆ ಬದಲು ಮಾಡಲು ಪಂಚಾಯತ್ ಕಾಯ್ದೆಯಡಿಯಲ್ಲಿ ಅವಕಾಶವಿಲ್ಲ. ಆದರೂ ಇದನ್ನು ಉಲ್ಲಂಘಿಸಿ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ ಜಮೀನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸುವ ಮೂಲಕ ಪಂಚಾಯತ್‌ನ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

► 4 ಕೋಟಿ ರೂ. ಮೌಲ್ಯದ ಜಮೀನು

ಕೊಣಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಎಕರೆಯೊಂದಕ್ಕೆ 2,22,58,500 ರೂ. ಮಾರ್ಗಸೂಚಿ ಬೆಲೆ ಇದೆ. ಇದರ ಪ್ರಕಾರ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಕೋರಿರುವ 2 ಎಕರೆಗೆ ಮಾರ್ಗಸೂಚಿ ಬೆಲೆ ಪ್ರಕಾರ 4,45,17,000 ರೂ.ಯಾಗಲಿದೆ. ಟ್ರಸ್ಟ್ ಕೋರಿರುವ ಜಮೀನು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 5 ಕಿ.ಮೀ. ಒಳಗೆ ಮತ್ತು ಕೊಣಾಜೆ ಪಂಚಾಯತ್ ವ್ಯಾಪ್ತಿಯ 7 ಕಿ.ಮೀ. ಒಳಗಿದೆ. ಮಾರುಕಟ್ಟೆ ಬೆಲೆ ಇದಕ್ಕಿಂತಲೂ ಹೆಚ್ಚಿಗೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಿರುವುದು ಸಚಿವ ಸಂಪುಟದ ಟಿಪ್ಪಣಿಯಿಂದ ಗೊತ್ತಾಗಿದೆ.

ಅಲ್ಲದೆ, ಜಮೀನು ಮಂಜೂರಾತಿ ಕೋರಿರುವ ಸಂಸ್ಥೆಯು ನೋಂದಾಯಿತ ಸಂಸ್ಥೆಯೇ ಎಂಬ ಬಗ್ಗೆ ಯಾವುದೇ ದಾಖ ಲಾತಿಗಳು ಕಂಡುಬರುತ್ತಿಲ್ಲ. ಒಂದು ವೇಳೆ ಜಮೀನು ಮಂಜೂರು ಮಾಡುವ ನಿರ್ಣಯ ಕೈಗೊಂಡಲ್ಲಿ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಇದೊಂದು ನೋಂದಾಯಿತ ಸಂಸ್ಥೆ ಎಂಬುದಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ಪಡೆದು ನೋಂದಾ ಯಿತ ಸಂಸ್ಥೆಯೆಂದು ಖಚಿತಪಡಿಸಿಕೊಂಡು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 22ಎ (1)(i)(3) ಅನ್ವಯ ಮಂಜೂರು ಮಾಡಲು ಕ್ರಮಕೈಗೊಳ್ಳಬಹುದು ಎಂದು ಕಾನೂನು ಇಲಾಖೆಯು ಅಭಿಪ್ರಾಯ ನೀಡಿರುವುದು ಸಚಿವ ಸಂಪು ಟದ ಪ್ರಸ್ತಾವನೆಯಿಂದ ತಿಳಿದು ಬಂದಿದೆ.

ಹಾಗೆಯೇ ದಿ ಇಂಡಿಯನ್ ರಿಜಿಸ್ಟ್ರೇಷನ್ ಆ್ಯಕ್ಟ್ 1908ರ ಅಡಿಯಲ್ಲಿ ನೋಂದಣಿ ಮಾಡಿದೆ. ಹೀಗಾಗಿ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ನ್ನು ನೋಂದಣಿ ಮಾಡಲು ಪ್ರತ್ಯೇಕ ಕಾನೂನು ಇಲ್ಲ. ಅಲ್ಲದೆ ದಿ ಇಂಡಿಯನ್ ಟ್ರಸ್ಟ್ ಆ್ಯಕ್ಟ್ 1882ರ ಅಡಿಯಲ್ಲಿ ಟ್ರಸ್ಟ್‌ಗಳನ್ನು ನೋಂದಣಿ ಮಾಡುವ ಬಗ್ಗೆ ಪ್ರತ್ಯೇಕ ಅವಕಾಶವಿಲ್ಲ. ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ನ ನೋಂದಣಿಗೆ ಸಂಬಂಧಿಸಿದ ದಾಖಲೆಗಳು ಇಲ್ಲದೇ ಇರುವುದರಿಂದ ಇಂಡಿಯನ್ ರಿಜಿಸ್ಟ್ರೇಷನ್ ಆ್ಯಕ್ಟ್ 1908ರ ಅಡಿಯಲ್ಲಿ ನೋಂದಣಿಯಾದ ಟ್ರಸ್ಟ್ ಡೀಡ್ ಮತ್ತು ಸಂಸ್ಥೆಯ ದಿ ಇನ್‌ಕಮ್ ಟ್ಯಾಕ್ಸ್ ಆ್ಯಕ್ಟ್ 1961ರ ಅಡಿ ನೋಂದಾಯಿಸಿರುವ ಕಾರಣ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ನ್ನು ನೋಂದಾಯಿತ ಸಂಸ್ಥೆಯೆಂದು ಪರಿಗಣಿಸಬಹುದು ಎಂದೂ ಕಾನೂನು ಇಲಾಖೆಯು ಅಭಿಪ್ರಾಯಿಸಿದೆ. 

ಕೊಣಾಜೆ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 200 ಎಕರೆಗೂ ಅಧಿಕ ಭೂಮಿ, ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್‌ಗೆ ಜಮೀನು ನೀಡಲಾಗಿದೆ. ಪಂಚಾಯತ್‌ವ್ಯಾಪ್ತಿ ಯಲ್ಲಿ ನಿವೇಶನ ರಹಿತ ಸಂಖ್ಯೆಯೂ ಹೆಚ್ಚಿದೆ. ಬಡ ಕುಟುಂಬಗಳಿಗೆ ಆದ್ಯತೆ ಮೇಲೆ ನಿವೇಶನ ಹಂಚಬೇಕಿದೆ. ಹೀಗಾಗಿ ಇಲ್ಲಿನ ಸರಕಾರಿ ಜಮೀನುಗಳನ್ನು ಖಾಸಗಿ ಟ್ರಸ್ಟ್, ಸಂಘ, ಸಂಸ್ಥೆಗಳಿಗೆ ನೀಡಬಾರದು ಎಂಬ ಉದ್ದೇಶದಿಂದಲೇ ಪಂಚಾಯತ್‌ನ ಗ್ರಾಮ ಸಭೆ ಮತ್ತು ಸಾಮಾನ್ಯ ಸಭೆಯು ಎನ್‌ಒಸಿ ನೀಡಿಲ್ಲ ಎಂದು ತಿಳಿದು ಬಂದಿದೆ. 

ಅಲ್ಲದೆ ಉಳ್ಳಾಲ ತಾಲೂಕು ಹೊಸ ತಾಲೂಕಾಗಿ ರಚನೆಯಾಗಿರುವುದರಿಂದ ತಾಲೂಕು ಕಚೇರಿಗಳಿಗೆ, ಆರೋಗ್ಯ ಕೇಂದ್ರಗಳಿಗೆ ಸೇರಿದಂತೆ ಇನ್ನಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನುಗಳನ್ನು ಕಾಯ್ದಿರಿಸಿರಬೇಕಿರುವ ಹಿನ್ನೆಲೆಯಲ್ಲಿ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್‌ಗೆ 2 ಎಕರೆ ಜಮೀನು ಮಂಜೂರು ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X