ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ತೀರ್ಮಾನ: ಸಚಿವ ಡಾ.ಸುಧಾಕರ್

ಬೆಂಗಳೂರು, ಜು.25: ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಸಚಿವರು, ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ.
ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಮೂಲಸೌಕರ್ಯ ಅಗತ್ಯತೆಗಳ ಕುರಿತಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಶೀಘ್ರವೇ ಸಭೆ ನಡೆಸಿ ಆದಷ್ಟು ಬೇಗ ಒಂದು ಕ್ರಿಯಾಯೋಜನೆ ರೂಪಿಸಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ.
— Dr Sudhakar K (@mla_sudhakar) July 25, 2022
1/3







