ಪ್ರೊ. ಎಂ. ಸುಧಾಕರ ರಾವ್ ನಿಧನ

ಉಡುಪಿ : ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಸುಧಾಕರ ರಾವ್ (84) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಪೂರ್ಣಪ್ರಜ್ಞ ಕಾಲೇಜಿನಲ್ಲಿ 37 ವರ್ಷಗಳ ಕಾಲ ಉಪನ್ಯಾಸಕರಾಗಿ, ಒಂದುವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಜೀವಶಾಸ್ತ್ರದ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿದ್ದ ಸುಧಾಕರ್ ರಾಯರು ಬರೆದ ಪುಸ್ತಕ ಪದನಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಪ್ರಸಿದ್ಧಿ ಪಡೆದಿತ್ತು.
ಪ್ರೊ.ಸುಧಾಕರ ರಾವ್ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಮತ್ತು ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ.ಎ.ರಾಘವೇಂದ್ರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಬಿ.ಎಂ. ಸೋಮಯಾಜಿ, ಕಾರ್ಯದರ್ಶಿ ತೇಜಸ್ವಿ ಶಂಕರ್ ಹಾಗೂ ಅಪಾರ ಸಂಖ್ಯೆಯ ಶಿಷ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story