Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಸರಕಾರದ್ದು ಜನೋತ್ಸವ ಅಲ್ಲ,...

ರಾಜ್ಯ ಸರಕಾರದ್ದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ: ಕಾಂಗ್ರೆಸ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ26 July 2022 10:02 PM IST
share
ರಾಜ್ಯ ಸರಕಾರದ್ದು ಜನೋತ್ಸವ ಅಲ್ಲ, ಭ್ರಷ್ಟೋತ್ಸವ: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು, ಜು.26: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಜು.28ರಂದು ನಡೆಸುತ್ತಿರುವ ವರ್ಷಾಚರಣೆ ವಿರುದ್ಧ ಕಿಡಿಗಾರಿರುವ ಕಾಂಗ್ರೆಸ್, ಇದು ಸರಕಾರದ ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂದು ಆರೋಪಿಸಿ, ಸರಕಾರದ ಆಡಳಿತ ವೈಫಲ್ಯಗಳ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದೆ.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.

ಬಸವರಾಜ ಬೊಮ್ಮಾಯಿ ಜನತಾ ಪರಿವಾರದ ಹಿನ್ನೆಲೆಯಿಂದ ಬಂದವರು, ಹೀಗಾಗಿ ಒಂದಷ್ಟು ವಿಭಿನ್ನವಾಗಿ ಕೆಲಸ ಮಾಡಬಹುದು ಎಂಬ ಭರವಸೆ ಇತ್ತು. ಆದರೆ ಕಳೆದ ಒಂದು ವರ್ಷದ ಆಡಳಿತ ನೋಡಿದರೆ ಸಂಪೂರ್ಣ ಭ್ರಮನಿರಸನವಾಗಿದೆ. ರಾಜ್ಯದ ಇತಿಹಾಸದಲ್ಲಿ 40 ಪರ್ಸೆಂಟ್ ಕಮಿಷನ್ ಕೊಡಬೇಕಾದ ಪರಿಸ್ಥಿತಿ ಇಲ್ಲಿನ ಗುತ್ತಿಗೆದಾರರಿಗೆ ಬಂದಿರುವುದು ಇದೇ ಮೊದಲು ಎಂದು ಸಿದ್ದರಾಮಯ್ಯ ಹೇಳಿದರು. 

ಸಂತೋಷ್ ಪಾಟೀಲ್ ಈ ಲಂಚದ ಹಣ ನೀಡಲಾಗದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು. ಪೊಲೀಸ್ ಇಲಾಖೆ ಆ ಮಂತ್ರಿಗೆ ಕ್ಲೀನ್ ಚಿಟ್ ನೀಡಿದೆ. ಡಿಕ್ಲರೇಷನ್ ಇರುವಂತಹ ಪ್ರಕರಣದಲ್ಲಿ ಅದನ್ನು ಮುಚ್ಚಿಹಾಕಿ ಬಿ ರಿಪೋರ್ಟ್ ನೀಡುವುದು ಅನ್ಯಾಯ. ಇದರ ಸಂಭ್ರಮಾಚರಣೆ ಮಾಡಲು ಬೊಮ್ಮಾಯಿ ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಜಿಎಸ್‍ಟಿ ಪರಿಹಾರ ಜುಲೈ 1 ರಿಂದ ನಿಂತು ಹೋಗಿದೆ. 2020-21ರಲ್ಲೇ ಸುಮಾರು 11 ಸಾವಿರ ಕೋಟಿ ಜಿಎಸ್‍ಟಿ ಬಾಕಿ ಬರಬೇಕಿತ್ತು ಅದನ್ನು ತೆಗೆದುಕೊಳ್ಳಲು ಆಗಿಲ್ಲ. ರಾಜ್ಯದ 25 ಬಿಜೆಪಿ ಸಂಸದರಿದ್ದಾರೆ. ಮುಖ್ಯಮಂತ್ರಿಗಳೇ ಜಿಎಸ್‍ಟಿ ಕೌನ್ಸಿಲ್ ಸದಸ್ಯರಿದ್ದಾರೆ ಆದರೂ ಯಾರೊಬ್ಬರೂ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಮಾತನಾಡಿಲ್ಲ ಎಂದು ಅವರು ಹೇಳಿದರು.

ಹಾಲು, ಮೊಸರು, ಮಂಡಕ್ಕಿಗಳಿಗೆ 0 ಪರ್ಸೆಂಟ್ ಇಂದ 5 ಪರ್ಸೆಂಟ್ ಜಿಎಸ್‍ಟಿ ವಿಧಿಸಿದ್ದಾರೆ. ಬಸವರಾಜ ಬೊಮ್ಮಾಯಿ ಸಬ್ ಕಮಿಟಿಗೆ ಅಧ್ಯಕ್ಷರಾಗಿ ಬಡವರ ರಕ್ತ ಕುಡಿಯುವ ಕೆಲಸ ಮಾಡಿದ್ದಾರೆ. ಮೂರು ವರ್ಷದಲ್ಲಿ ಮನೆಗಳನ್ನು ಕಟ್ಟಿಲ್ಲ. ಕಾನೂನು ಸುವ್ಯವಸ್ಥೆ ಕುಸಿದಿದೆ. ಹಿಜಾಬ್, ಹಲಾಲ್, ಜಾತ್ರೆಗಳಲ್ಲಿ ಅಲ್ಪಸಂಖ್ಯಾತ ವ್ಯಾಪಾರಿಗಳಿಗೆ ನಿಷೇಧ ಮುಂತಾದವುಗಳನ್ನು ಸರಕಾರವೇ ಹುಟ್ಟುಹಾಕಿತು ಎಂದು ಸಿದ್ದರಾಮಯ್ಯ ಕಿಡಿಗಾರಿದರು.

2018ರಲ್ಲಿ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ? 5 ವರ್ಷಗಳಲ್ಲಿ 1.50 ಲಕ್ಷ ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡುತ್ತೇವೆ ಎಂದು ಹೇಳಿದ್ದರು. ಇಲ್ಲಿಯವರೆಗೆ 50 ಸಾವಿರ ಕೋಟಿಯನ್ನೂ ಖರ್ಚು ಮಾಡಿಲ್ಲ. ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಸಿದ್ದರಾಮಯ್ಯ ಹೇಳಿದರು. 

ಪಿಎಸ್‍ಐ ಸೇರಿದಂತೆ ಇನ್ನಿತರ ಹಗರಣದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನವಾದದ್ದು ಇದೇ ಮೊದಲು. ಕೆಪಿಎಸ್ಸಿ ಮುಂದೆ ಬಿಜೆಪಿ ಶಾಸಕರೇ ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಮುಖ್ಯಮಂತ್ರಿಯಾಗಲು ಎಷ್ಟು ಹಣ ಕೊಡಬೇಕು? ಯಡಿಯೂರಪ್ಪ ಮನೆಯಲ್ಲೇ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದರು. ಎಚ್.ವಿಶ್ವನಾಥ್ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 10 ಪರ್ಸೆಂಟ್ ಕಮಿಷನ್ ಹೊಡೆಯಲಾಗಿದೆ ಎಂದಿದ್ದರು ಎಂದು ಅವರು ತಿಳಿಸಿದರು.

ವಿಧಾನಸೌಧ ಇಂದು ವ್ಯಾಪಾರದಸೌಧ ಆಗಿದೆ. ಇವರು ‘ಭ್ರಷ್ಟೋತ್ಸವʼ ಎಂದು ತಮ್ಮ ಸರಕಾರದ ಸಾಧನೆಯನ್ನು ಆಚರಣೆ ಮಾಡಬೇಕು. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದವರು ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ಹೇಳಲು ಯಾವ ನೈತಿಕ ಹಕ್ಕಿದೆ? ಇವರು ಆರಂಭಿಸಿದ ಆಪರೇಷನ್ ಕಮಲ ಇಡೀ ದೇಶಕ್ಕೆ ರೋಗದಂತೆ ಹಬ್ಬಿದೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಇದು ಸಾಧನಾ ಸಮಾವೇಶವಲ್ಲ, ಇದು ‘ಬಿಜೆಪಿ ಸರಕಾರದ ಭ್ರಷ್ಟೋತ್ಸವ’. ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕರ್ನಾಟಕ ಹಾಗೂ ಬೆಂಗಳೂರು ದೇಶದ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಇದೇ ಬಿಜೆಪಿ ಸರಕಾರದ ಸಾಧನೆ. ಈ ಸರಕಾರ ನಿಜಕ್ಕೂ ಸಾಧನೆ ಮಾಡಿದ್ದರೆ, ಪ್ರಧಾನಿ, ಕೇಂದ್ರ ಹಣಕಾಸು ಸಚಿವರು ಸೇರಿದಂತೆ ಎಲ್ಲರೂ ಕಾರ್ಯಕ್ರಮಕ್ಕೆ ಬಂದು ಸರಕಾರದ ಬೆನ್ನುತಟ್ಟಿ ಹೋಗುತ್ತಿದ್ದರು ಎಂದರು.

ರೈತರ ಆದಾಯ ಡಬಲ್ ಆಗಿಲ್ಲ, ಹಾಲು ಉತ್ಪಾದಕರ ಆದಾಯ ಡಬಲ್ ಆಗಿಲ್ಲ, ರೈತರು ಬೆಳೆದ ಬೆಳೆಗೆ ಡಬಲ್ ಬೆಲೆ ಸಿಗುತ್ತಿಲ್ಲ, ಆದರೆ ರೈತರು ಖರೀದಿ ಮಾಡುವ ರಸಗೊಬ್ಬರ, ಕೀಟನಾಶಕ ಹಾಗೂ ಇತರೆ ಔಷಧಿ ದರ ಡಬಲ್ ಆಗಿದೆ. ಕೊರೋನ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡುವುದಾಗಿ ಸರಕಾರ ಘೋಷಿಸಿತ್ತು. ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ 20 ಲಕ್ಷ ಕೋಟಿ ರೂ.ವಿಶೇಷ ಪ್ಯಾಕೇಜ್ ಪ್ರಕಟಿಸಿದ್ದರು. ಅದರಿಂದ ಯಾರಿಗೆ ಉಪಯೋಗವಾಗಿದೆ? ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಎಷ್ಟು ಯುವಕರಿಗೆ ಉದ್ಯೋಗ ನೀಡಲಾಗಿದೆ ಎಂಬ ಪಟ್ಟಿಯನ್ನು ನೀಡಲಿ ಎಂದು ಶಿವಕುಮಾರ್ ಆಗ್ರಹಿಸಿದರು. 

ಭ್ರಷ್ಟಾಚಾರದ ವಿಚಾರವಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿಗೆ ನೀಡಿದರೂ ತನಿಖೆ ಯಾಕೆ ಮಾಡಲಿಲ್ಲ? ಕೊರೋನ ಸಮಯದಲ್ಲಿ ಹಾಸಿಗೆ ಹಗರಣ, ಪಿಪಿ ಕಿಟ್ ಸೇರಿದಂತೆ ಚಿಕಿತ್ಸಾ ಉಪಕರಣಗಳ ಖರೀದಿ ಹಗರಣ, ಹೆಣದ ಮೇಲೆ ಹಣ ಎಲ್ಲವೂ ಇಡೀ ದೇಶಕ್ಕೆ ಪರಿಚಿತವಾಗಿದೆ. ಚಾಮರಾಜನಗರ ಹಾಗೂ ಇತರೆ ಭಾಗಗಳಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರಿಗೂ ಸರಕಾರ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಇದು ಈ ಸರಕಾರದ ಸಾಧನೆಯೇ? ಎಂದು ಅವರು ಪ್ರಶ್ನಿಸಿದರು.

ಚರ್ಚ್‍ಗಳಲ್ಲಿ ಭಜನೆ ಮಾಡುವುದು, ಕರಾವಳಿ ಭಾಗದಲ್ಲಿ ಕೋಮುಗಲಭೆ, ಪೊಲೀಸ್ ಅಧಿಕಾರಿಗಳು ಖಾಕಿ ವಸ್ತ್ರ ತ್ಯಜಿಸಿ ಕೇಸರಿ ವಸ್ತ್ರ ಧರಿಸಿದ್ದು ಅವರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ? ಈ ಸರಕಾರದ ತನಿಖಾ ತಂಡಗಳು ಭ್ರಷ್ಟಾಚಾರಗಳನ್ನು ರಕ್ಷಣೆ ಮಾಡುವ ಪಡೆಯಾಗಿವೆ ಎಂದು ಅವರು ಕಿಡಿಗಾರಿದರು.

ಅಂಬೇಡ್ಕರ್, ಕೆಂಪೇಗೌಡ, ನಾರಾಯಣ ಗುರು, ಬಸವಣ್ಣ, ಕುವೆಂಪು, ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ, ಭಗತ್ ಸಿಂಗ್ ಸೇರಿದಂತೆ ದೇಶ ಪ್ರೇಮಿಗಳನ್ನು ಬಿಡದೆ ಎಲ್ಲರಿಗೂ ಈ ಸರಕಾರ ಅಪಮಾನ ಮಾಡಿದೆ. ಈ ಮಹನೀಯರ ಸಿದ್ಧಾಂತದ ಮೇಲೆ ದಾಳಿ ನಡೆಸಿ ಎಲ್ಲ ಸಮುದಾಯದ ಜನರ ಹೃದಯದ ಮೇಲೆ ಗಾಯ ಮಾಡಿದ್ದು ಇದು ಸರಕಾರದ ಸಾಧನೆಯೆ? ಎಂದು ಅವರು ಪ್ರಶ್ನಿಸಿದರು.

ಈ ಸರಕಾರ ಪರಿಶಿಷ್ಟರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗಂಗಾ ಕಲ್ಯಾಣ ಯೋಜನೆಯಲ್ಲಿ  ಭ್ರಷ್ಟಾಚಾರ ನಡೆಸಿದೆ. ರೈತರಿಗೆ ನೀಡುವ ಸಬ್ಸಿಡಿ ಹಣದಲ್ಲಿ ತೋಟಗಾರಿಕಾ ಸಚಿವರಿಗೆ ಶೇ.8.5ರಷ್ಟು ಕಮಿಷನ್ ನೀಡಬೇಕು. ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30ರಷ್ಟು ಕಮಿಷನ್. ಸರಕಾರದ ಈ ಭ್ರಷ್ಟೋತ್ಸವದಲ್ಲಿ ಜನರು ಭಾಗಿಯಾಗಿ ಅವರ ಭ್ರಷ್ಟಾಚಾರದ ಸಾಧನೆಗಳನ್ನು ಅವರಿಗೆ ತಿಳಿಸಬೇಕು. ಸರಕಾರ ಇದೆಲ್ಲದಕ್ಕೂ ಉತ್ತರ ನೀಡಲೇಬೇಕು ಎಂದು ಶಿವಕುಮಾರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ಸಹ ಮುಖ್ಯಸ್ಥ ಮನ್ಸೂರ್ ಅಲಿಖಾನ್, ವಾರ್ ರೂಂ ಮುಖ್ಯಸ್ಥ ಸೆಂಥಿಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X