ನಂತೂರು: ಸರಣಿ ಅಪಘಾತ; ಸ್ಕೂಟರ್ ಸವಾರ ಮೃತ್ಯು

ಸಾಂದರ್ಭಿಕ ಚಿತ್ರ
ಮಂಗಳೂರು, ಜು.26: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಬಳಿ ಸೋಮವಾರ ಸಂಜೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಕಾವೂರು ಜ್ಯೋತಿನಗರದ ನಿವಾಸಿ ಪ್ರದೀಪ್ (24) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಸುಮಾರು 6ಕ್ಕೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ನಂತೂರು ಬಬ್ಬುಸ್ವಾಮಿ ದೈವಸ್ಥಾನದ ಬಳಿ ಸ್ಕೂಟರ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿತು. ಬಳಿಕ ಲಾರಿಗೆ ಸ್ಕೂಟರ್ ಢಿಕ್ಕಿಯಾಯಿತು. ಇದರಿಂದ ಪ್ರದೀಪ್ರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಪ್ರದೀಪ್ ವಿಶ್ವಹಿಂದೂ ಪರಿಷತ್-ಬಜರಂಗದಳ ಧರ್ಮಶಾಸ್ತ್ರ ಶಾಖೆ ಜ್ಯೋತಿನಗರದ ಸಹ ಸಂಚಾಲಕರಾಗಿದ್ದರು.
Next Story