Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕರ್ನಾಟಕದ ರಾಜಕಾರಣದಲ್ಲಿ...

ಕರ್ನಾಟಕದ ರಾಜಕಾರಣದಲ್ಲಿ ಸಿದ್ದರಾಮಯ್ಯನವರ ಪಾತ್ರ

ಪಿ.ಎಸ್. ಜಯರಾಮುಪಿ.ಎಸ್. ಜಯರಾಮು27 July 2022 11:09 AM IST
share
ಕರ್ನಾಟಕದ ರಾಜಕಾರಣದಲ್ಲಿ ಸಿದ್ದರಾಮಯ್ಯನವರ ಪಾತ್ರ

ಮಾಜಿ ಮುಖ್ಯ ಮಂತ್ರಿ ಹಾಗೂ ಪ್ರಸ್ತುತ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕ, ಸಿದ್ದರಾಮಯ್ಯನವರು 24x7ರ ಮಾದರಿಯ ರಾಜಕಾರಣಿ. ಅವರ ಕಣ್ಣು ಮತ್ತು ಕಿವಿ ರಾಜ್ಯದ ರಾಜಕೀಯದ ಮೇಲೆ ಕೇಂದ್ರೀಕೃತವಾಗಿರುತ್ತದೆ. ಅವರು 1983ರಲ್ಲಿ ಭಾರತೀಯ ಲೋಕದಳದ ಮೂಲಕ ವಿಧಾನ ಸಭೆ ಪ್ರವೇಶಿಸಿದರು. ಆದರೆ, ಶೀಘ್ರದಲ್ಲೇ ಜನತಾ ಪಕ್ಷಕ್ಕೆ ಸೇರಿದರು.

ಅವರ ಕನ್ನಡ ಭಾಷೆಯ ಮೇಲಿನ ಪ್ರೀತಿ ಮತ್ತು ಬದ್ಧತೆಯನ್ನು ಗಮನಿಸಿ, ರಾಜ್ಯದ ಮೊದಲ ಕಾಂಗ್ರೆಸೇತರ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಅವರನ್ನು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದರು. 1985ರಲ್ಲಿ ರಾಜ್ಯವು ಮಧ್ಯಂತರ ಚುನಾವಣೆಗೆ ಒಳಗಾದಾಗ, ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಪುನರಾಯ್ಕೆಯಾದರು ಮತ್ತು ಹೆಗಡೆಯವರ ಮಂತ್ರಿಮಂಡಲ ಸೇರಿದರು. ಜನತಾ ದಳದ ವಿಭಜನೆಯ ನಂತರ ಸಿದ್ದರಾಮಯ್ಯ ದೇವೇಗೌಡರ ನೇತೃತ್ವದ ಜನತಾದಳ (ಜಾತ್ಯತೀತ) ಬಣವನ್ನು ಪ್ರವೇಶಿಸಿದರು. ಆದಾಗ್ಯೂ, ಹಿಂದುಳಿದ ವರ್ಗದ ಬಗ್ಗೆ ಸದಾಕಾಲ ಜಾಗೃತರಾದ ಅವರು ಒಬಿಸಿಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಅಹಿಂದ ಗುಂಪನ್ನು ರಚಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಅಹಿಂದ ಸಮಾವೇಶದಲ್ಲಿ ಸಿದ್ದರಾಮಯ್ಯನವರು ಮಾಡಿದ ಭಾಷಣವು ಜೆಡಿ(ಎಸ್) ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುವಲ್ಲಿ ಮತ್ತು ಅಂತಿಮವಾಗಿ ಅವರನ್ನು ಪಕ್ಷದಿಂದ ಹೊರಹಾಕಲು ಕಾರಣವಾಯಿತು.

ನಂತರದ ವರ್ಷಗಳಲ್ಲಿ, ಸಿದ್ದರಾಮಯ್ಯನವರ ರಾಜಕೀಯ ಪ್ರವೃತ್ತಿಯು ಅವರು ಜೆಡಿಎಸ್ ಮತ್ತು ಬಿಜೆಪಿಗೆ ವಿರೋಧವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲು ಕಾರಣವಾಯಿತು. ಕಾಂಗ್ರೆಸ್‌ನಲ್ಲಿ ಗಣನೀಯವಾದ ಒಬಿಸಿ ನಾಯಕತ್ವ ಅನುಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವರು ಪಕ್ಷದಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಲು ಪ್ರಾರಂಭಿಸಿದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯ ಪ್ರಮುಖ ಪಾತ್ರ ವಹಿಸಿದ್ದರು. ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಡವರಿಗಾಗಿ ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್‌ಗಳಂತಹ ಅನೇಕ ಯೋಜನೆಗಳನ್ನು ಜಾರಿಗೆ ತಂದರು. ಸಮರ್ಥ ಆಡಳಿತಗಾರರಾಗಿದ್ದ ಅವರ ಮುಖ್ಯಮಂತ್ರಿ ಅವಧಿಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮಗೊಂಡಿತು. ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಶ್ರಮಿಸುವುದರ ಹೊರತಾಗಿ, ಹಿಂದುಳಿದ ವರ್ಗಗಳಿಗೆ ರಾಜ್ಯ ರಾಜಕಾರಣದಲ್ಲಿ ತಮ್ಮ ಪಾತ್ರವನ್ನು ವಹಿಸಲು ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ‘ಜಾತಿ ಗಣತಿ’ ಎಂದು ಜನಪ್ರಿಯವಾಗಿ ಕರೆಯಲ್ಪಟ್ಟಿರುವ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹೊರತರುವುದಕ್ಕಾಗಿ ಆಯೋಗವನ್ನು ರಚಿಸಿದರು. ಆಯೋಗದ ವರದಿ ತಯಾರಾದರೂ, ಅದು ಅಧಿಕೃತವಾಗಿ ಬೆಳಕಿಗೆ ಬಂದಿಲ್ಲವಾದರೂ, ರಾಜ್ಯದಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಸಂಖ್ಯಾಬಲ ಕಡಿಮೆಯಾಗಿದೆ ಎನ್ನುವುದನ್ನು ಆಯೋಗದ ವರದಿ ಪ್ರಸ್ತಾಪಿಸಿದೆ ಎನ್ನಲಾಗಿದೆ. ಬಹುಶಃ, ರಾಜ್ಯ ರಾಜಕೀಯದಲ್ಲಿ ಆ ಸಮುದಾಯಗಳ ಭವಿಷ್ಯದ ಪಾತ್ರದ ಮೇಲೆ ಪರಿಣಾಮವನ್ನೂ ಬೀರಬಹುದು.

ಮೈಸೂರಿನಲ್ಲಿ ತಮ್ಮ ತವರು ಕ್ಷೇತ್ರದಲ್ಲಿ ಹಲವು ಸ್ಥಳೀಯ ಗುಂಪುಗಳ ತೀವ್ರ ಪ್ರತಿರೋಧದಿಂದಾಗಿ 2018ರಲ್ಲಿ, ಸಿದ್ದರಾಮಯ್ಯ ತಮ್ಮ ರಾಜಕೀಯ ನೆಲೆಯನ್ನು ಉತ್ತರ ಕರ್ನಾಟಕದ ಬಾದಾಮಿಗೆ ಬದಲಾಯಿಸಿ ಅಲ್ಲಿಂದ ವಿಧಾನಸಭೆ ಪ್ರವೇಶಿಸಿದರು. ವಿಧಾನ ಸಭಾ ಚುನಾವಣೆಯ ಅಸ್ಪಷ್ಟ ಜನಾದೇಶದಿಂದಾಗಿ ಕಾಂಗ್ರೆಸ್ ಪಕ್ಷವು ಜೆಡಿಎಸ್‌ನೊಂದಿಗೆ ಸರಕಾರ ರಚಿಸಿದರೂ, ಸಮ್ಮಿಶ್ರ ಸರಕಾರ ಹೆಚ್ಚು ಕಾಲ ಉಳಿಯಲಿಲ್ಲ. ‘ಆಪರೇಷನ್ ಕಮಲ’ದ ಫಲವಾಗಿ ಬಿಜೆಪಿ ಬಿ.ಎಸ್. ಯಡಿಯೂರಪ್ಪನೇತೃತ್ವದಲ್ಲಿ ಸರಕಾರ ರಚಿಸಿತು.

ಈ ಹಿಂದೆ ಹಲವು ಬಾರಿ ರಾಜ್ಯ ಬಜೆಟ್ ಮಂಡಿಸಿ, ಪ್ರಸ್ತುತ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಹಾಗೂ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆಯುವಲ್ಲಿನ ಬಿಜೆಪಿ ಸರಕಾರದ ಅಸಮರ್ಥತೆಯನ್ನು ಸಿದ್ದರಾಮಯ್ಯ ಬಲವಾಗಿ ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಗ್ಗೆ ಒಳಜಗಳಗಳಿದ್ದಾಗ್ಯೂ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೇಕೆದಾಟು ಪಾದಯಾತ್ರೆ ಪಕ್ಷದಲ್ಲಿನ ಒಗ್ಗಟ್ಟನ್ನು ಬಿಂಬಿಸುವಲ್ಲಿ ಸ್ವಲ್ಪಮಟ್ಟಿಗಾದರೂ ಯಶಸ್ವಿಯಾಯಿತು.

ಆಗಸ್ಟ್ 3ರಂದು ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬವನ್ನು ಅವರ ಬೆಂಬಲಿಗರು ಆಚರಿಸಲು ಉದ್ದೇಶಿಸಿರುವುದು ಮತ್ತು ಮಾಧ್ಯಮಗಳು ಅದನ್ನು ‘ಸಿದ್ದರಾಮೋತ್ಸವ’ ಎಂದು ಬಿಂಬಿಸುತ್ತಿರುವುದು ಮತ್ತು ಅದು ಪಕ್ಷದಲ್ಲಿ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನದ ಸಂಕೇತ ಎನ್ನುವ ಮಾತುಗಳು ಒಂದು ರೀತಿಯಲ್ಲಿ ಪಕ್ಷಕ್ಕೆ ಮುಜುಗರವನ್ನು ಉಂಟುಮಾಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದು ಒಬಿಸಿ ಮತ್ತು ಒಕ್ಕಲಿಗ ಸಮುದಾಯಗಳಲ್ಲಿನ ಜಾತಿ ರಾಜಕಾರಣಕ್ಕೆ (ಶಿವಕುಮಾರ್ ಬೆಂಬಲಿಗರು ‘ಶಿವಕುಮಾರೋತ್ಸವ’ ಆಚರಿಸುವ ಧೋರಣೆಯನ್ನು ಹೊಂದಿರುವ ಹಿನ್ನೆಲೆಯಲ್ಲಿ) ಕಾರಣವಾಗಬಹುದೆನ್ನುವ ಆತಂಕಗಳೂ ಪಕ್ಷದ ಕೇಂದ್ರ ನಾಯಕರನ್ನು ಪೇಚಿಗೆ ಸಿಲುಕಿಸಿದೆ ಎಂದರೆ ತಪ್ಪಾಗಲಾರದು. ರಾಜ್ಯಮಟ್ಟದಲ್ಲಿನ ಹಿರಿಯ ನಾಯಕರೂ ‘ಸಿದ್ದರಾಮೋತ್ಸವದ’ ಬಗ್ಗೆ ಅಸಮಾಧಾನವನ್ನು ಹೊಂದಿದ್ದಾರೆ ಎನ್ನುವುದೂ ಸತ್ಯ.

ಸಿದ್ದರಾಮಯ್ಯ ಪ್ರಬಲ ಒಬಿಸಿ ನಾಯಕ ಎನ್ನುವುದರಲ್ಲಿ ಸಂಶಯವಿಲ್ಲ. ಆದಾಗ್ಯೂ, ಅವರು ಒಬಿಸಿ ಗುಂಪಿನೊಳಗೆ ಸಂಖ್ಯಾತ್ಮಕವಾಗಿ ಪ್ರಬಲವಾದ ಕುರುಬ ಸಮುದಾಯವನ್ನು ಪ್ರತಿನಿಧಿಸುವ ಬಣದ ನಾಯಕ ಎನ್ನುವುದು ಅನೇಕರ ಅಭಿಪ್ರಾಯ.

ಒಬಿಸಿಗಳ ಉನ್ನತಿಯ ಹೋರಾಟದಲ್ಲಿ, ಬಿಜೆಪಿ ಸರಕಾರದಲ್ಲಿ ದೀರ್ಘಕಾಲದ ಒಬಿಸಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪನವರು ಸಿದ್ದರಾಮಯ್ಯನವರಿಗೆ ಸವಾಲಾಗಿರುವುದನ್ನೂ ಗಮನಿಸಬೇಕು. ಅಂತೆಯೇ, ಕಾಂಗ್ರೆಸ್ ಪಕ್ಷದ ಹಲವು ಹಿರಿಯರು, ವಿಶೇಷವಾಗಿ ಎಸ್‌ಸಿ, ಎಸ್‌ಟಿ ನಾಯಕರು, ಸಿದ್ದರಾಮಯ್ಯನವರ ಕಾರ್ಯಶೈಲಿ ಬಗ್ಗೆ ಅಸಮಾಧಾನ ಹೊಂದಿರುವುದು ಗಮನಾರ್ಹ. ಈ ಎಲ್ಲ ಕಾರಣಗಳಿಂದಾಗಿ, ಸಿದ್ದರಾಮಯ್ಯನವರು ಎಲ್ಲರೊಡನೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕಾಗಿರುವುದು ಪ್ರಸ್ತುತ. ಈ ನಿಟ್ಟಿನಲ್ಲಿ ಅವರು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕಾಗಿದೆ.

ಜಾತ್ಯತೀತ ನಾಯಕರಾಗಿ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಬದ್ಧರಾಗಿರುವ ಸಿದ್ದರಾಮಯ್ಯ ಹಿಜಾಬ್, ಹಲಾಲ್ ವಿವಾದಗಳು ಮತ್ತು ಶಾಲಾ ಪಠ್ಯಕ್ರಮಗಳ ಕೇಸರಿಕರಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಬೊಮ್ಮಾಯಿ ಆಡಳಿತದ ಕೋಮು ಧ್ರುವೀಕರಣದ ಅಜೆಂಡಾವನ್ನು ಬಲವಾಗಿ ವಿರೋಧಿಸುತ್ತಿದ್ದಾರೆ. ಜೊತೆಯಲ್ಲಿಯೇ, ಅವರು 2023 ರ ಚುನಾವಣೆಗಾಗಿ ಪಕ್ಷದ ಚುನಾವಣಾ ಪ್ರಚಾರಗಳಲ್ಲಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ಸಂಬಂಧಿಸಿದ ಜನರ ಸಮಸ್ಯೆಗಳನ್ನು ಪ್ರಧಾನ ವಿಷಯಗಳಾಗಿ ತೆಗೆದುಕೊಳ್ಳುವ ಮೂಲಕ ಮತದಾರರ ಮನವೊಲಿಸುವ ಕಾರ್ಯದಲ್ಲಿ ತೊಡಗಬೇಕಿದೆ.

(ಲೇಖಕರು ಬೆಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಮಾಜಿ ಪ್ರಾಧ್ಯಾಪಕರು.)

share
ಪಿ.ಎಸ್. ಜಯರಾಮು
ಪಿ.ಎಸ್. ಜಯರಾಮು
Next Story
X