ಮಲ ತಂದೆಯಿಂದ ಬಾಲಕಿಯ ಅತ್ಯಾಚಾರ; ಆರೋಪಿಯ ಬಂಧನ
ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಸಾಂದರ್ಭಿಕ ಚಿತ್ರ (source: PTI)
ಕೊಣಾಜೆ, ಜು.27: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕಿಯ ಮೇಲೆ ಮಲತಂದೆಯೇ ಅತ್ಯಾಚಾರ ಎಸಗಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಗಂಭೀರಾವಸ್ಥೆಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತಿ ಪರಿತ್ಯಕ್ತ ಮಹಿಳೆಯೊಬ್ಬಳು 25 ವರ್ಷದ ಆರೋಪಿಯನ್ನು ಮರು ಮದುವೆಯಾಗಿದ್ದು, ಮಹಿಳೆಗೆ ಮೊದಲ ಪತಿಯಲ್ಲಿ ಒಂಭತ್ತು ವರ್ಷದ ಮಗಳಿದ್ದಾಳೆ. ಇದೀಗ ಗರ್ಬಿಣಿಯಾಗಿದ್ದ ಮಹಿಳೆ ಸೋಮವಾರ ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದಳು. ಕಳೆದ ರಾತ್ರಿ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದಳೆನ್ನಲಾಗಿದೆ. ಈ ಸಂದರ್ಭದಲ್ಲಿ ಮದ್ಯಪಾನ ಮಾಡಿ ಬಂದ ಆರೋಪಿ ಮಲತಂದೆ ಬಾಲಕಿಯನ್ನು ಅತ್ಯಾಚಾರಗೈದಿದ್ದಾನೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ .
ಈ ನಡುವೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Next Story