Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಧನಾ ಸಮಾವೇಶ ಸರಕಾರದ ಯಾವ ಸಾಧನೆಗಾಗಿ?:...

ಸಾಧನಾ ಸಮಾವೇಶ ಸರಕಾರದ ಯಾವ ಸಾಧನೆಗಾಗಿ?: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ27 July 2022 12:47 PM IST
share
ಸಾಧನಾ ಸಮಾವೇಶ ಸರಕಾರದ ಯಾವ ಸಾಧನೆಗಾಗಿ?: ದಿನೇಶ್ ಗುಂಡೂರಾವ್

ಬೆಂಗಳೂರು, ಜು.27: ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಜು.28ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಮಾಡಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಆದರೆ ಈ ಸಮಾವೇಶ ಸರಕಾರದ ಯಾವ ಸಾಧನೆಗಾಗಿ.? ಗುತ್ತಿಗೆದಾರರಿಂದ 40 ಶೇ. ಕಮಿಷನ್ ಪಡೆದಿದ್ದಕ್ಕೋ.? ಸಂತೋಷ್ ಪಾಟೀಲ್ ಆತ್ಮಹತ್ಯೆ‌ ಮಾಡಿಕೊಂಡಿದಕ್ಕೋ.? ಅಥವಾ ಈಶ್ವರಪ್ಪರಿಗೆ 'ಬಿ ರಿಪೋರ್ಟ್' ಕೊಡಿಸಿದಕ್ಕೋ.? ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿಯವರ ಒಂದು ವರ್ಷದ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ.? ಪಿಎಸ್ಸೈ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ನಡೆಸಿದಕ್ಕೆ ಈ ಸಮಾವೇಶವೇ.? ಬೊಮ್ಮಾಯಿಯವರು ಸಾಧನಾ ಸಮಾವೇಶ ಮಾಡುವ ಬದಲು ಹಗರಣದ ಸಮಾವೇಶ ನಡೆಸುವುದು ಸೂಕ್ತವಲ್ಲವೇ.? ಹಗರಣದಿಂದಲೇ ಕುಖ್ಯಾತಿ ಗಳಿಸಿರುವ ಈ ಸರ್ಕಾರ ಯಾವ ಮುಖ ಇಟ್ಟುಕೊಂಡು ಸಾಧನೆಯ ಮಾತಾನಾಡುತ್ತಿದೆ.?

ಮುಖ್ಯಮಂತ್ರಿ ಆದ ಒಂದು ವರ್ಷದ ಅವಧಿಯಲ್ಲಿ ಬೊಮ್ಮಾಯಿಯವರು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯಾವ ಯೋಜನೆ ತಂದಿದ್ದಾರೆ.? ಹೋಗಲಿ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ.? ಕ್ರಿಯೆಗೆ‌ ಪ್ರತಿಕ್ರಿಯೆ ಇರಲಿದೆ ಎಂದು ಕೋಮುಗಲಭೆಗೆ ಪ್ರಚೋದಿಸಿ ಸಮಾಜ ಒಡೆದಿದ್ದು ಬೊಮ್ಮಾಯಿಯವರ ಸಾಧನೆಯೆ.? ಹಿಜಾಬ್, ಹಲಾಲ್ ವಿವಾದ ಸೃಷ್ಟಿಸಿದ್ದು ಸಾಧನೆಯೆ.?

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಜಿ.ಎಸ್.ಟಿ. ಬಾಕಿ‌ ಕೊಡದೆ ಸತಾಯಿಸುತ್ತಿದೆ. ಬೊಮ್ಮಾಯಿಯವರು ಎಷ್ಟು ಬಾರಿ ಕೇಂದ್ರದ ಬಳಿ ಜಿ.ಎಸ್.ಟಿ. ಬಾಕಿ ಕೇಳಿದ್ದಾರೆ.? ತಿಂಗಳಿಗೊಮ್ಮೆ ದಿಲ್ಲಿ ಟ್ರಿಪ್ ಹೋಗುವ ಬೊಮ್ಮಾಯಿಯವರು ಒಂದೇ‌ ಒಂದು ಸಾರಿಯಾದರೂ ಕೇಂದ್ರದಿಂದ ಆಗುತ್ತಿರುವ ಜಿ.ಎಸ್.ಟಿ. ಅನ್ಯಾಯದ ಬಗ್ಗೆ ಬಾಯಿ ಬಿಟ್ಟಿದ್ದಾರೆಯೆ.? ನಾಳೆಯ ಸಮಾವೇಶ ಯಾವ ಸಾಧನೆಗಾಗಿ.?

ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಜನರಿಗೆ ಒಂದಷ್ಟು ನಿರೀಕ್ಷೆಗಳಿದ್ದವು. ಆದರೆ ಆ ನಿರೀಕ್ಷೆಗಳೆಲ್ಲಾ ಒಡೆದ ಬಲೂನ್‌ಗಳಾಗಿವೆ. ಚುರುಕಿಲ್ಲದ ಆಡಳಿತ ಯಂತ್ರ, ವಿಲೇವಾರಿಯಾಗದ ಕಡತಗಳು, ಗುತ್ತಿಗೆದಾರರಿಗೆ ಬಿಡುಗಡೆಯಾಗದ ಬಿಲ್‌ಗಳು, ನೆರೆ ಪರಿಹಾರದಲ್ಲಿನ ಲೋಪ ಬೊಮ್ಮಾಯಿ ಸರಕಾರದ ನಿಷ್ಕ್ರಿಯತೆಗೆ ಸಾಕ್ಷಿ.‌ ಇಷ್ಟಾದರೂ ಸಮಾವೇಶ ಬೇಕೆ.? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

1
ಬೊಮ್ಮಾಯಿ ಈ ರಾಜ್ಯದ CM ಆಗಿ ನಾಳೆಗೆ ಒಂದು ವರ್ಷ.
ಈ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಮಾಡಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಆದರೆ ಈ ಸಮಾವೇಶ ಸರ್ಕಾರದ ಯಾವ ಸಾಧನೆಗಾಗಿ?
ಗುತ್ತಿಗೆದಾರರಿಂದ 40% ಕಮೀಷನ್ ಪಡೆದಿದ್ದಕ್ಕೋ?
ಸಂತೋಷ್ ಪಾಟೀಲ್ ಆತ್ಮಹತ್ಯೆ‌ ಮಾಡಿಕೊಂಡಿದಕ್ಕೋ?
ಅಥವಾ ಈಶ್ವರಪ್ಪರಿಗೆ 'ಬಿ ರಿಪೋರ್ಟ್' ಕೊಡಿಸಿದಕ್ಕೋ??

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X