ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ | 10 ಮಂದಿ ಪೊಲೀಸ್ ವಶಕ್ಕೆ: ಗೃಹಸಚಿವ ಆರಗ ಜ್ಞಾನೇಂದ್ರ

ಪ್ರವೀಣ್ ನೆಟ್ಟಾರ್
ಬೆಂಗಳೂರು, ಜು.27: ದ.ಕ. ಜಿಲ್ಲೆಯ ಬೆಳ್ಳಾರೆಯಲ್ಲಿ ಕಳೆದ ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಈಗಾಗಲೇ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ತನಿಖೆಯನ್ನು ಕೇರಳಕ್ಕೂ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರವೀಣ್ ನೆಟ್ಟಾರು ಹತ್ಯೆ ದುರದೃಷ್ಟಕರ ಎಂದಿರುವ ಗೃಹಸಚಿವರು, ರಾಜ್ಯದಲ್ಲಿ ಪದೇಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ ಎಂದವರು ಹೇಳಿದ್ದಾರೆ.
ಇದನ್ನೂ ಓದಿ... ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ: ಸಿದ್ದರಾಮಯ್ಯ







