ವಕ್ವಾಡಿ: ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಕುಂದಾಪುರ : ವಕ್ವಾಡಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ಬಾಲಕಿಯರ ವಿಭಾಗದಲ್ಲಿ ವಕ್ವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಗೆದ್ದುಕೊಂಡಿತು.
ಬಾಲಕರ ವಿಭಾಗದಲ್ಲಿ ಕುವೆಂಪು ತೆಕ್ಕಟ್ಟೆ ಶಾಲೆ ದ್ವೀತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾಟವನ್ನು ನಿವೃತ್ತ ಇಂಜಿಯರ್, ಶಾಲೆಯ ಹಳೆ ವಿದ್ಯಾರ್ಥಿ ಶಶಿಧರ್ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಳಾವರ ಗ್ರಾಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ ವಹಿಸಿದ್ದರು.
ಮುಖ್ಯ ಅಥಿತಿಗಳಾಗಿ ಕಾಳಾವರ ಗ್ರಾಪಂ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ರವಿರಾಜ್ ಶೆಟ್ಟಿ, ಭಾರತಿ, ಶಾರದಾ ದೇವಾಡಿಗ, ಎಸ್‌ಡಿಎಂಸಿ ಅಧ್ಯಕ್ಷ ಅನಂತ ಪದ್ಮನಾಭ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆನಂದ್ ಆಚಾರ್, ಪ್ರಾಥಮಿಕ ಶಿಕ್ಷಕ ಸಂಘದ ಕುಂದಾಪುರ ವಲಯದ ಅಧ್ಯಕ್ಷ ಗಣೇಶ್ ಶೆಟ್ಟಿ ಮೊಳಹಳ್ಳಿ, ವೇಣುಗೋಪಾಲ್ ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ಸದಾರಾಮ್ ಶೆಟ್ಟಿ ತೆಕ್ಕಟ್ಟೆ, ಕುಂದಾಪುರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್, ಸಮೂಹ ಸಂಪನ್ಮೂಲ ವ್ಯಕ್ತಿ ಕವಿತಾ ಹಾಗೂ ಬಿ.ಆರ್.ಪಿ ಸುಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ಶೆಟ್ಟಿ ಕೆ. ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಸುಭಾಸ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸುಲೇಖ ಜಿ. ವಂದಿಸಿದರು.







