ಮಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ

ಕಮಿಷನರ್ ಎನ್. ಶಶಿಕುಮಾರ್
ಮಂಗಳೂರು, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ಳಾರೆ, ಸುಳ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಉಳ್ಳಾಲ, ಸುರತ್ಕಲ್ ಮೊದಲಾದ ಕಡೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲೂ ಅಲ್ಲಲ್ಲಿ ಪೊಲೀಸ್ ಹಾಕಲಾಗಿದೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಿ, ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಎಚ್ಚರ ವಹಿಸಲು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೂಚನೆ ನೀಡಿದ್ದಾರೆ.
Next Story





